ತುಮಕೂರಿನ ದೊಡ್ಡನಾರವಂಗಲ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಒಳಪಡುವ 23 ಗ್ರಾಮದ ಜನರು ಕುಡಿಯುವ ನೀರಿಗಾಗಿ ಆಶ್ರಯಿಸಿರುವ ದೊಡ್ಡನಾರವಂಗಲ ಕೆರೆ ನೀರು ಕಲುಷಿತಗೊಂಡಿದ್ದರ ಬಗ್ಗೆ ‘ಎಕ್ಸ್’ ಬಳಕೆದಾರರೊಬ್ಬರು ನೀಡಿದ ದೂರಿನನ್ವಯ ಮುಖ್ಯಮಂತ್ರಿಗಳ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಪರಿಶೀಲಿಸುವಂತೆ ಸೂಚನೆ ನೀಡಿದ್ದರು.
ತಕ್ಷಣ ಕಾರ್ಯಪ್ರವೃತ್ತರಾದ ಅಧಿಕಾರಿಗಳು ದೊಡ್ಡನಾರವಂಗಲ ಕೆರೆಯ ಜಾಕ್ ವೆಲ್ ಬಳಿ ಅಳವಡಿಸಿರುವ ಪಂಪು ಮೋಟಾರ್ ನ ಬಳಿ ತುಂಬಿಕೊಂಡಿದ್ದ ಕಸ — ಕಡ್ಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯ ಮಾಡಿದ್ದಾರೆ. ಎಲ್ಲಾ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡಲು ವ್ಯವಸ್ಥೆ ಮಾಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA