ಐಸಿಸಿ ಟಿ20 ವಿಶ್ವ ಚಾಂಪಿಯನ್ ಭಾರತ ತಂಡಕ್ಕೆ ಬಿಸಿಸಿಐ 125 ಕೋಟಿ ರೂಪಾಯಿಗಳ ನಗದು ಬಹುಮಾನ ಘೋಷಿಸಿತ್ತು. ಅದರಂತೆ ಪ್ರತೀ ಆಟಗಾರನಿಗೆ ತಲಾ 5 ಕೋಟಿ ರೂಪಾಯಿ, ರಾಹುಲ್ ದ್ರಾವಿಡ್ ಸೇರಿದಂತೆ ಕೋಚಿಂಗ್ ಸ್ಟಾಫ್’ಗ 2.50 ಕೋಟಿ ರೂಪಾಯಿ ಹಾಗೂ ಸಪೋರ್ಟಿಂಗ್ ಸ್ಟಾಫ್’ಗೆ ತಲಾ 2 ಕೋಟಿ ರೂಪಾಯಿ ನಗದು ಬಹುಮಾನವನ್ನು ನೀಡಲಾಗಿದೆ.
ಆದರೆ ಮುಂಬೈ ಮೂಲದ ಭಾರತ ತಂಡದ ಸಹಾಯಕ ಸಿಬ್ಬಂದಿಯೊಬ್ಬರು ಹೇಳಿರುವ ಪ್ರಕಾರ, ”ಸಪೋರ್ಟಿಂಗ್ ಸ್ಟಾಫ್’ಗೆ 2 ಕೋಟಿ ರೂಪಾಯಿಗಳನ್ನು ನೀಡಲು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹಿಂದೇಟು ಹಾಕಿದ್ದರಂತೆ. ಆ ವಿಚಾರ ಗೊತ್ತಾಗುತ್ತಿದ್ದಂತೆ ಜಯ್ ಶಾ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದ ಟೀಮ್ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ , ತಮ್ಮ ಪಾಲಿಗೆ ಬರಲಿದ್ದ 5 ಕೋಟಿ ರೂಪಾಯಿಗಳನ್ನು ಸಹಾಯಕ ಸಿಬ್ಬಂದಿಗೆ ನೀಡಲು ಮುಂದಾಗಿದ್ದರು.
ಬಿಸಿಸಿಐ ಮುಂದೆ ಸಿಬ್ಬಂದಿ ವರ್ಗದವರಿಗೆ ಉತ್ತಮ ಪ್ರತಿಫಲ ಸಿಗಬೇಕೆಂದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಪಟ್ಟು ಹಿಡಿದಿದ್ದರು ಎಂದು ತಿಳಿದು ಬಂದಿದೆ. ಅದರ ಫಲವಾಗಿ ಇದೀಗ ಪ್ರತಿಯೊಬ್ಬರಿಗೂ ಕೋಟಿ ರೂ. ಮೊತ್ತದಲ್ಲಿ ಬಹುಮಾನ ಹಣ ಲಭಿಸಿದೆ.
ಇದು ತಿಳಿಯುತ್ತಿದ್ದಂತೆ ಎಲ್ಲಾ ಸಹಾಯಕ ಸಿಬ್ಬಂದಿಗೆ 2 ಕೋಟಿ ರೂಪಾಯಿಗಳನ್ನು ನೀಡಲು ಬಿಸಿಸಿಐ ಮುಂದಾಯಿತು” ಎಂದು ಹೆಸರು ಹೇಳಲಿಚ್ಛಿಸದ ಸಹಾಯಕ ಸಿಬ್ಬಂದಿಯೊಬ್ಬರು ಹೇಳಿರುವುದಾಗಿ ಪತ್ರಿಕೆ ವರದಿ ಮಾಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA