ಗದಗ: ಡೆಂಗ್ಯೂಗೆ 11 ವರ್ಷದ ಬಾಲಕಿಯೊಬ್ಬಳು ಬಲಿಯಾಗಿರುವ ಘಟನೆ ಗದಗದ ರೋಣ ಪಟ್ಟಣದಲ್ಲಿ ನಡೆದಿದೆ. ಸಾವನ್ನಪ್ಪಿದ ಬಾಲಕಿಯನ್ನು ರೋಣ ಪಟ್ಟಣದ ಆಶ್ರಯ ಕಾಲೋನಿಯ ನಿವಾಸಿ ಪ್ರಾರ್ಥನಾ ಸಾಂತಪ್ಪ ಗಂಟಿನವರ ಎಂದು ಗುರುತಿಸಲಾಗಿದೆ.
ಬಾಲಕಿಯು ಕಳೆದ ಒಂದು ವಾರದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದಳು.ನಾಲ್ಕು ದಿನಗಳ ಹಿಂದೆ ರೋಣ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.
ನಂತರ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನಲೆಯಲ್ಲಿ, ಗದಗ ಜಿಲ್ಲಾಸ್ಪತ್ರೆಗೆ ಬಾಲಕಿಯನ್ನು ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಬಾಲಕಿ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


