ತುಮಕೂರು : ಅಂಗನವಾಡಿ ಕೇಂದ್ರದಲ್ಲಿ ಕುಕ್ಕರ್ ಸ್ಪೋಟಗೊಂಡು ಕೆಲಕಾಲ ಗಾಬರಿ ಹುಟ್ಟಿಸಿದ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಸಿ.ಎಸ್.ಪುರ ಬಳಿಯ ಸಿ.ಯಡವನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೆಲ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಂಗನವಾಡಿಯಲ್ಲಿ 14 ಮಕ್ಕಳು ಇದ್ದರು.
ಸಿ ಯಡವನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಇಂದು ಮಧ್ಯಾಹ್ನ ಮಕ್ಕಳಿಗೆ ಊಟ ತಯಾರಿಸುವಾಗ ಕುಕ್ಕರ್ ಸ್ಪೋಟಗೊಂಡಿದೆ.
ಕೂಡಲೇ ಮಕ್ಕಳನ್ನ ಅಂಗನವಾಡಿ ಕೊಠಡಿಯಿಂದ ಹೊರಕರೆತಂದು ರಕ್ಷಣೆ ಮಾಡಲಾಗಿದೆ. ಅಂಗನವಾಡಿಗೆ ಪ್ರತ್ಯೇಕ ಅಡುಗೆ ಕೊಠಡಿ ನಿರ್ಮಿಸಿಕೊಂಡುವಂತೆ, ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದ್ದ ಗ್ರಾಮಸ್ಥರು. ಈ ಬಗ್ಗೆ ತಲೆಗೆಡಿಸಿಕೊಳ್ಳದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುಬ್ಬಿ ತಾಲೂಕಿನ ಸಿ.ಎಸ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA