ತಂತಿ ಬೇಲಿ ಬಳಿ ಮೂತ್ರ ವಿಸರ್ಜನೆ ಮಾಡುವಾಗ ವಿದ್ಯುತ್ ತಗುಲಿ ಯುವಕ ಸಾವನ್ನಪ್ಪಿದ ಘಟನೆ ಶಿವಮೊಗ್ಗ ರಿಪ್ಪನ್ ಪೇಟೆಯ ಗವಟೂರಿನ ಹಳೂರು ಗ್ರಾಮದಲ್ಲಿ ನಡೆದಿದೆ.
ಕಾರ್ತಿಕ್ ಎಸ್ (19) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಬೆಳಗಿನಜಾವ ಯುವಕನ ಮನೆ ಮುಂಭಾಗದಲ್ಲಿ ಘಟನೆ ನಡೆದಿದೆ. ಮನೆ ಮುಂಭಾಗದ IBX ತಂತಿ ಬೇಲಿ ಬಳಿಯಲ್ಲಿ ಮೂತ್ರ ವಿಸರ್ಜನೆ ಮಾಡುವಾಗ ಕರೆಂಟ್ ಶಾಕ್ ಹೊಡೆದಿದೆ. ಮನೆ ಮುಂಭಾಗದ ಬೇಲಿ ಮೇಲೆ ವಿದ್ಯುತ್ ವೈರ್ ತುಂಡಾಗಿ ಬಿದ್ದಿತ್ತು.
ಏಕಾಏಕಿ ವಿದ್ಯುತ್ ಪ್ರವಹಿಸಿ ಬೇಲಿಯ ಮೇಲೆ ಬಿದ್ದ ಯುವಕನನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾಗಿಸಿದರೂ ಬದುಕುಳಿಯಲಿಲ್ಲ ಎನ್ನಲಾಗಿದೆ. ಕಾರ್ತಿಕ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿಬಿಎ ವ್ಯಾಸಂಗ ಮಾಡುತಿದ್ದ. ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


