nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಯಂತಿ ಗ್ರಾಮದ ಬಳಿ ಸರ್ವೀಸ್ ರಸ್ತೆಗೆ ಆಗ್ರಹ: ತಿಪಟೂರು ಉಪ ವಿಭಾಗಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ

    April 20, 2026

    ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    April 20, 2026

    ತಿಪಟೂರು: ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ

    April 20, 2026
    Facebook Twitter Instagram
    ಟ್ರೆಂಡಿಂಗ್
    • ಜಯಂತಿ ಗ್ರಾಮದ ಬಳಿ ಸರ್ವೀಸ್ ರಸ್ತೆಗೆ ಆಗ್ರಹ: ತಿಪಟೂರು ಉಪ ವಿಭಾಗಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ
    • ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ತಿಪಟೂರು: ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಿಲ್ಲೆಯಲ್ಲಿನ ಘನತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಅಂತ್ಯ ಹಾಡಲಿವೆ ಎಂ.ಆರ್.ಎಫ್. ಕೇಂದ್ರಗಳು
    ಜಿಲ್ಲಾ ಸುದ್ದಿ July 12, 2024

    ಜಿಲ್ಲೆಯಲ್ಲಿನ ಘನತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಅಂತ್ಯ ಹಾಡಲಿವೆ ಎಂ.ಆರ್.ಎಫ್. ಕೇಂದ್ರಗಳು

    By adminJuly 12, 2024No Comments2 Mins Read
    mrf center.jpg

    ಉತ್ತರ ಕನ್ನಡ ಜಿಲ್ಲೆಯ 12 ನಗರಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ರತಿದಿನ ಸಂಗ್ರಹವಾಗುವ ಘನ ತ್ಯಾಜ್ಯವನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡುವ ಮೂಲಕ ನಗರಪ್ರದೇಶಗಳಲ್ಲಿ ನೈರ್ಮಲ್ಯ ಮತ್ತು ಸಾರ್ವಜನಿರ ಆರೋಗ್ಯ ಕಾಪಾಡುವ ಉದ್ದೇಶದಿಂದ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 1368.81 ಲಕ್ಷ ರೂ ಗಳ ವೆಚ್ಚದಲ್ಲಿ 12 ಎಂ.ಆರ್.ಎಫ್.(Materials Recovery Facility ) ಕೇಂದ್ರಗಳನ್ನು ಆರಂಭಿಸಲು ಎಲ್ಲಾ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲಾಗುತ್ತಿದೆ.

    ಪ್ರಸ್ತುತ ಜಿಲ್ಲೆಯಲ್ಲಿನ ನಗರ ಸ್ಥಳೀಯ ಸಂಸ್ಥೆಗಳಾದ, ಕಾರವಾರದಲ್ಲಿನ 31 ವಾರ್ಡ್, ದಾಂಡೇಲಿಯ 31, ಶಿರಸಿಯ 31, ಭಟ್ಕಳದ 23, ಕುಮಟಾದ 23, ಅಂಕೋಲದ 23, ಹಳಿಯಾಳದ 23, ಹೊನ್ನಾವರದ 20, ಸಿದ್ದಾಪುರದ 15, ಯಲ್ಲಾಪುರದ 19, ಮುಂಡಗೋಡ 19 ಮತ್ತು ಜಾಲಿಯ 20 ಸೇರಿದಂತೆ ಒಟ್ಟು 298 ವಾರ್ಡ್ಗಳಿಂದ ಪ್ರತಿ ದಿನ 125.6 ಟನ್ ತ್ಯಾಜ್ಯವನ್ನು ಸಂಗ್ರಹಿಸಲಾಗುತ್ತಿದ್ದು, ಇದರಲ್ಲಿ 43.96 ಟನ್ ಘನ ತ್ಯಾಜ್ಯವನ್ನು ಸಂಗ್ರಹವಾಗಿದೆ. ಈ ಘನತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಿ, ಪರಿಸರದಲ್ಲಿ ನೈರ್ಮಲ್ಯ ಕಾಪಾಡುವುದು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಿಗೆ ಅತ್ಯಂತ ಸವಾಲಿನ ಕೆಲಸವಾಗಿದೆ.


    Provided by
    Provided by

    ಈ ಸಮಸ್ಯೆಗೆ ಎಂ.ಆರ್.ಎಫ್ ಕೇಂದ್ರಗಳ ಸ್ಥಾಪನೆಯಿಂದ ಸೂಕ್ತ ಪರಿಹಾರ ದೊರೆಯಲಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮನೆ ಮನೆ ಯಿಂದ ಸಂಗ್ರಹಿಸಲಾದ ಒಣ ತ್ಯಾಜ್ಯವನ್ನು ಈ ಎಮ್.ಆರ್.ಎಫ್ ಕೇಂದ್ರದಲ್ಲಿ ತೂಕ ಮಾಡಿ ಶೇಖರಣಾ ವಿಭಾಗದಲ್ಲಿ ಶೇಖರಿಸಲಾಗುತ್ತದೆ. ನಂತರ ಈ ತ್ಯಾಜ್ಯವನ್ನು ಕ್ವನ್ವೆಯರ್ ಬೆಲ್ಟ್ ಸಹಾಯದಿಂದ ಹಲವು ವಿಭಾಗವಾಗಿ ವಿಂಗಡಿಸಲಾಗುತ್ತದೆ. ಹೀಗೆ ವಿಂಗಡಿಸಿದ ತ್ಯಾಜ್ಯವನ್ನು ಬೈಲಿಂಗ್ ಯಂತ್ರದ ಸಹಾಯದಿಂದ ಬೈಲ್ ಮಾಡಿ, ಬೈಲ್ ಮಾಡಿದ ತ್ಯಾಜ್ಯದಲ್ಲಿ ಪುನರ್ ಬಳಕೆ ಮಾಡಬಹುದಾದ ತ್ಯಾಜ್ಯವನ್ನು ಅಧಿಕೃತ ರಿಸೈಕಲಿಂಗ್ ಕಂಪನಿಗಳಿಗೆ ಮಾರಾಟ ಮಾಡಲಾಗುತ್ತದೆ. ಪುರ್ನಬಳಕೆ ಮಾಡಲು ಸಾಧ್ಯವಿಲ್ಲದ ತ್ಯಾಜ್ಯವನ್ನು ಕೋ ಪ್ರೋಸೆಸಿಂಗ್ ಉದ್ದೇಶಕ್ಕೆ ಸಿಮೆಂಟ್ ಫ್ಯಾಕ್ಟರಿಗಳಿಗೆ ಸಾಗಿಸುವ ಮೂಲಕ ಅತ್ಯಂತ ವೈಜ್ಞಾನಿಕವಾಗಿ ಘನತ್ಯಾಜ್ಯದ ವಿಲೇವಾರಿ ಸಾಧ್ಯವಾಗಲಿದೆ.

    ಪ್ರಸ್ತುತ ಘನ ತ್ಯಾಜ್ಯ ವಿಲೇವಾರಿಗೆ ಅಳವಡಿಸಿಕೊಂಡಿರುವ ವಿಧಾನದಿಂದ ಶೇ.5 ರಿಂದ 10 ಘನತ್ಯಾಜ್ಯವನ್ನು ಮಾತ್ರ ಸ್ಥಳೀಯ ಸ್ಕಾçಪ್ ವ್ಯಾಪಾರಿಗಳಿಗೆ ನೀಡಲಾಗುತ್ತಿದ್ದು, ಉಳಿದ ಶೇಕಡಾವಾರು ತ್ಯಾಜ್ಯವನ್ನು ವಿಲೇವಾರಿ ಮಾಡುವುದು ಪ್ರಮುಖ ಸಮಸ್ಯೆಯಾಗಿದೆ. ಆದರೆ ಎಂ.ಆರ್.ಎಫ್ ಕೇಂದ್ರಗಳಲ್ಲಿ ಅಳವಡಿಕೊಳ್ಳಲಾಗುವ ಅತ್ಯಂತ ವೈಜ್ಞಾನಿಕ ವಿಧಾನಗಳಿಂದ ಶೇ.70 ರಿಂದ 80 ರಷ್ಟು ಘನ ತ್ಯಾಜ್ಯವನ್ನು ಈಗಾಗಲೇ ನೋಂದಣಿಯಾಗಿರುವ ಮಾರಾಟಗಾರರಿಗೆ ಸ್ಪರ್ಧಾತ್ಮಕ ದರದಲ್ಲಿ ನೇರವಾಗಿ ಮಾರಾಟ ಮಾಡಬಹುದಾಗಿದೆ. ಅಲ್ಲದೇ ಪರಿಸರಕ್ಕೆ ಅತ್ಯಂತ ಮಾರಕವಾಗಿರುವ ಪ್ಲಾಸ್ಟಿಕ್ ಸಮಸ್ಯೆಯನ್ನು ಅತ್ಯಂತ ಯಶಸ್ವಿಯಾಗಿ ನಿರ್ಮೂಲನೆ ಮಾಡುವುದರೊಂದಿಗೆ, ಇಲ್ಲಿನ ಆದಾಯವು ನಗರ ಸ್ಥಳೀಯ ಸಂಸ್ಥೆಗಳಿಗೆ ಲಾಭದಾಯಕ ಆದಾಯದ ಪ್ರಮುಖ ಮೂಲ ಚಟುವಟಿಕೆಯಾಗಲಿದೆ.

    ಎಂ.ಆರ್.ಎಫ್ ಕೇಂದ್ರಗಳ ಆರಂಭದಿಂದಾಗಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಡಿಮೆ ಮಾನವ ಸಂಪನ್ಮೂಲದ ಬಳಕೆಯಿಂದ ಉತ್ತಮ ರೀತಿಯಲ್ಲಿ ತ್ಯಾಜ್ಯ ನಿರ್ವಹಣಾ ಸೇವೆ ಒದಗಿಸುವುದರ ಜೊತೆಗೆ ತ್ಯಾಜ್ಯ ನಿರ್ವಹಣಾ ಯೋಜನೆಯನ್ನು ದಕ್ಷತೆಯಿಂದ ಜಾರಿಗೊಳಿಸಲು ಅನುಕೂಲವಾಗಲಿದೆ. ಅಲ್ಲದೇ ತ್ಯಾಜ್ಯದಿಂದ ಅತೀ ಹೆಚ್ಚಿನ ಸಂಪನ್ಮೂಲವನ್ನು ಪಡೆಯಲು ಮತ್ತು ಅವೈಜ್ಞಾನಿಕ ತ್ಯಾಜ್ಯ ನಿರ್ವಹಣೆಯನ್ನು ತಡೆಗಟ್ಟಿ ಪರಿಸರ ಸಂರಕ್ಷಣೆ ಮಾಡಲು ಸಾಧ್ಯವಾಗಲಿದೆ.

    ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ತೀವ್ರ ಸಮಸ್ಯೆಯಾಗಿರುವ ಘನ ತ್ಯಾಜ್ಯ ವಿಲೇವಾರಿಯ ಸಮಸ್ಯೆಗೆ ಎಂ.ಆರ್.ಎಫ್ ಕೇಂದ್ರಗಳ ಆರಂಭದಿಂದ ಸೂಕ್ತ ಪರಿಹಾರ ದೊರೆಯಲಿದೆ. ಈ ಕೇಂದ್ರಗಳಲ್ಲಿ ತ್ಯಾಜ್ಯ ವಿಲೇವಾರಿಯನ್ನು ವೈಜ್ಞಾನಿಕವಾಗಿ ಕೈಗೊಳ್ಳಲಾಗುತ್ತದೆ. ಅತ್ಯಂತ ಪರಿಸರ ಸ್ನೇಹಿಯಾಗಿ ಕಾರ್ಯ ನಿರ್ವಹಿಸುವ ಈ ಕೇಂದ್ರಗಳ ಸ್ಥಾಪನೆಯಿಂದ ತ್ಯಾಜ್ಯ ವಿಲೇವಾರಿಯ ಜೊತೆಗೆ ಆದಾಯ ವೃಧ್ದಿ ಮತ್ತು ಸ್ಥಳೀಯರಿಗೆ ಈ ಕೇಂದ್ರದಲ್ಲಿ ಉದ್ಯೋಗವಕಾಶ ಕೂಡಾ ದೊರೆಯಲಿದೆ. ಪ್ರಸಕ್ತ ವರ್ಷದ ಕ್ರಿಯಾ ಯೋಜನೆಯಲ್ಲಿ ಜಿಲ್ಲೆಯ ಎಲ್ಲಾ ನಗರಸ್ಥಳೀಯ ಸಂಸ್ಥೆಗಳಲ್ಲಿ ಈ ಕೇಂದ್ರಗಳ ಸ್ಥಾಪನೆಗೆ ಅನುಮೋದನೆ ದೊರೆತಿದೆ. : ಸ್ಟೆಲ್ಲಾ ವರ್ಗಿಸ್, ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ದಿ ಕೋಶ, ಉತ್ತರ ಕನ್ನಡ ಜಿಲ್ಲೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಜಯಂತಿ ಗ್ರಾಮದ ಬಳಿ ಸರ್ವೀಸ್ ರಸ್ತೆಗೆ ಆಗ್ರಹ: ತಿಪಟೂರು ಉಪ ವಿಭಾಗಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ

    April 20, 2026

    ತಿಪಟೂರು: ತಾಲೂಕಿನ ಕಿಬ್ಬನಹಳ್ಳಿ ಹೋಬಳಿಯ ಕರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಯಂತಿ ಗ್ರಾಮದ ಬಳಿ ಸರ್ವೀಸ್ ರಸ್ತೆ ಹಾಗೂ ತಂಗುದಾಣ…

    ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    April 20, 2026

    ತಿಪಟೂರು: ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ

    April 20, 2026

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.