ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯವು ಅಸಂಘಟಿತ ಕಾರ್ಮಿಕರ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ, ಅಸಂಘಟಿತ ಕಾರ್ಮಿಕರಿಗೆ ವಿಶೇಷ ನೀತಿಗಳು ಹಾಗೂ ಯೋಜನೆಗಳನ್ನು ರೂಪಿಸಲು ಕೇಂದ್ರ ಸರ್ಕಾರವು ಇ–ಶ್ರಮ್ ಯೋಜನೆ ಜಾರಿಗೊಳಿಸಿದೆ.
ಇ-ಶ್ರಮ ಕಾರ್ಡ್‌ನೊಂದಿಗೆ, ಅಸಂಘಟಿತ ವಲಯದ ಕಾರ್ಮಿಕರು ಆರೋಗ್ಯ ಮತ್ತು ಜೀವ ವಿಮೆ, ವೃದ್ಧಾಪ್ಯ ಪಿಂಚಣಿ, ಅಂಗವೈಕಲ್ಯ ಪಿಂಚಣಿ, ಮಾತೃತ್ವ ಪ್ರಯೋಜನ ಮುಂತಾದ ಸರ್ಕಾರದಿಂದ ಪ್ರಾರಂಭಿಸಲಾದ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳನ್ನು ನೀಡಲಾಗುತ್ತದೆ. ಇ-ಶ್ರಮ ಕಾರ್ಡ್ ಅಸಂಘಟಿತ ಕಾರ್ಮಿಕರಿಗೆ ಬ್ಯಾಂಕ್ ಖಾತೆಗಳನ್ನು ತೆರೆಯಲು ಮತ್ತು ವಿವಿಧ ಹಣಕಾಸು ಸೇವೆಗಳನ್ನು ಪಡೆಯಲು ಅನುವು ಮಾಡಿಕೊಡುವ ಮೂಲಕ ಆರ್ಥಿಕ ಸೇರ್ಪಡೆಗೆ ಅನುಕೂಲ ಮಾಡಿ ಕೊಡಲಾಗುತ್ತದೆ.
ಇ-ಶ್ರಮ್ ಪೋರ್ಟಲ್ www.eshram.gov.in ನಲ್ಲಿ ಸ್ವಯಂ ನೋಂದಣಿ ಅಥವಾ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ನವೆಂಬರ್ ಅಂತ್ಯದವರೆಗೆ ನೋಂದಣಿ ಮಾಡಿಸಿಕೊಳ್ಳಬಹುದು. ಇ-ಶ್ರಮ್ ಪೋರ್ಟಲ್‍ನಲ್ಲಿ ನೋಂದಣಿಯು ಉಚಿತವಾಗಿದ್ದು, ಯಶಸ್ವಿ ನೋಂದಣಿಯ ನಂತರ ಫಲಾನುಭವಿಗಳು ಸ್ಥಳದಲ್ಲಿಯೇ ಗುರುತಿನ ಚೀಟಿಯನ್ನು ಪಡೆಯಬಹುದಾಗಿದೆ.
ಇ–ಶ್ರಮ ಪೋರ್ಟಲ್ ನಲ್ಲಿ ಕಾರ್ಮಿಕ ವರ್ಗಗಳಲ್ಲಿ ಅತ್ಯಂತ ದುರ್ಬಲ ವರ್ಗದವರಾದ ವಲಸೆ ಕಾರ್ಮಿಕರು ಸೇರಿದಂತೆ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ಸಮಗ್ರ ದತ್ತಾಂಶವನ್ನು ಸಿದ್ದಪಡಿಸಲಾಗುತ್ತಿದೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೃಷಿ ಕಾರ್ಮಿಕರು, ಮೀನುಗಾರರು, ಆಶಾ ಕಾರ್ಯಕರ್ತೆಯರು, ಮನೆಗೆಲಸ ಕಾರ್ಮಿಕರು, ಚಾಲಕರು, ಟೈಲರ್‍ಗಳು, ಬೀದಿಬದಿ ವ್ಯಾಪಾರಿಗಳು ಸೇರಿದಂತೆ ಕೇಂದ್ರ ಸರ್ಕಾರ ಗುರುತಿಸಿರುವ ಸುಮಾರು 379 ವರ್ಗಗಳ ಕಾರ್ಮಿಕರು ಹಾಗೂ ಪಟ್ಟಿಯಲ್ಲಿ ಸೇರಿರದ ಅಸಂಘಟಿತ ಕಾರ್ಮಿಕರು “ಇತರೆ ವರ್ಗ”ಗಳಡಿ ನೋಂದಣಿಯಾಗಬಹುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


