ಆಷಾಡ ಮಾಸದಲ್ಲಿ ಚಾಮುಂಡಿ ಬೆಟ್ಟಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಅದರಲ್ಲೂ ವೀಕೆಂಡ್‌ನಲ್ಲಿ ಜನರು ಹೆಚ್ಚಾಗಿ ಬರುತ್ತಾರೆ. ಇದೀಗ ರಾಜ್ಯಾದ್ಯಂತ ಶಕ್ತಿ ಯೋಜನೆ ಚಾಲ್ತಿಯಲ್ಲಿದೆ. ಆದ್ದರಿಂದ ಮಹಿಳೆಯರು ಆಗಮಿಸುವ ನಿರೀಕ್ಷೆ ಜಾಸ್ತಿಯಿದೆ.
ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಆಷಾಡ ನಿಮಿತ್ತ ಪೂಜಾ ವಿಧಿ ವಿಧಾನಗಳು ಆರಂಭವಾಗಿದೆ. ನಾಡ ದೇವತೆ ಚಾಮುಂಡಿಗೆ ಅಭಿಷೇಕ, ಅರ್ಚನೆ, ಅಷ್ಟೋತ್ತರ ಪೂಜೆಗಳು ದೇವಸ್ಥಾನದಲ್ಲಿ ನೆರವೇರುತ್ತಿವೆ.
ಆಷಾಡ ಮಾಸದ ಮೊದಲನೇ ಶುಕ್ರವಾರದಂದು ತಾಯಿ ಚಾಮುಂಡಿ ದೇವಿಯ ದರ್ಶನ ಪಡೆದರೆ ಒಳಿತಾಗುವುದು ಎಂಬ ನಂಬಿಕೆ ಇದೆ. ಹೀಗಾಗಿ ಚಾಮುಂಡಿ ಬೆಟ್ಟಕ್ಕೆ ನಿನ್ನೆ ಜನಸಾಗರವೇ ಹರಿದು ಬಂದಿತ್ತು. ಆ ಮೂಲಕ ದೇವಿಯ ದರ್ಶನ ಪಡೆದು ಭಕ್ತರು ಪುನೀತರಾಗಿದ್ದಾರೆ.
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದ್ದಾರೆ.
ಕಳೆದ ವರ್ಷದಂತೆಯೇ ಈ ವರ್ಷವೂ ಬೆಟ್ಟಕ್ಕೆ ಸಾರ್ವಜನಿಕರ ಖಾಸಗಿ ವಾಹನಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಬೆಟ್ಟದ ತಪ್ಪಲಿನಿಂದ ಉಚಿತ ಬಸ್ ವ್ಯವಸ್ಥೆ ಜೊತೆಗೆ ಪೊಲೀಸ್ ಬಿಗಿ ಬಂದೋಬಸ್ತ್, ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಗಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


