ಔರಾದ: ಕಮಲ ನಗರ ನೇಮಕಗೊಂಡ ಅಂಗನವಾಡಿ ಕಾರ್ಯಕರ್ತೆಯರ ನೇಮಕ ರದ್ದುಪಡಿಸಲು ಆಗ್ರಹಿಸಿ ತಾಲೂಕಿನ ಸಂತಪುರದಲ್ಲಿ ಡಿಎಸ್ಎಸ್ ಪ್ರತಿಭಟನೆ ನಡೆಸಿತು.
ಶುಕ್ರವಾರ ಸಂತಪುರ ಸಿಡಿಪಿಒ ಕಚೇರಿ ಎದುರು ಧರಣಿ ನಡೆಸಿದ ಪ್ರತಿಭಟನಾಕಾರರು, ತಾಂಡಾಗಳಲ್ಲಿರುವ ಅಂಗನವಾಡಿಗಳಿಗೆ ಮಾತ್ರ ಅರ್ಜಿ ಕರೆದಿದ್ದಾರೆ ಎಂದು ಆರೋಪಿಸಿದರಲ್ಲದೇ ಅಂಗನವಾಡಿ ಕಾರ್ಯಕರ್ತೆ ನೇಮಕ ರದ್ದು ಪಡಿಸುವಂತೆ ಒತ್ತಾಯಿಸಿದರು.
ಬೀದರ ಜಿಲ್ಲಾ ಔರಾದ ಕಮಲ ನಗರ ತಾಲೂಕಿನಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಗಳ ನೇಮಕಾತಿಯಲ್ಲಿ ಲೋಪದೋಷವಾಗಿದ್ದು, ಇದನ್ನು ನ್ಯಾಯಯುತವಾಗಿ ಸರಿಪಡಿಸುವಂತೆ ಆಗ್ರಹಿಸಿ ಇದೇ ವೇಳೆ ದಲಿತ ಸಂಘರ್ಷ ಸಮಿತಿ ( ದಲಿತ ವಾದ) ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಿಗೆ ಮನವಿ ನೀಡಿದರು.
ಪ್ರತಿಭಟನೆಯಲ್ಲಿ ಧನರಾಜ, ಸಂಜೀವ ಕುಮಾರ, ಬಂಟಿ ದಾರಬಾರೆ, ದಿಲೀಪ, ಗೌತಮ, ತುಕಾರಾಮ ಇದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


