ಔರಾದ: ಬೀದರ ಜಿಲ್ಲೆ ಔರಾದ ತಾಲೂಕಿನ ಮಹಾರಾಜವಾಡಿ ಗ್ರಾಮದ ಟಿಪ್ಪು ಸುಲ್ತಾನ ಚೌಕ್ ಮುಂಭಾಗದ ರಸ್ತೆಯಲ್ಲಿ ಕೊಳಚೆ ನೀರು ನಿಂತು ಮಾರಕ ರೋಗಕ್ಕೆ ಆಹ್ವಾನ ನೀಡುತ್ತಿದೆ
ಈ ಕೊಳಚೆ ನೀರು ನಿಂತಿರುವ ರಸ್ತೆಯ ಸುತ್ತಲು ಸಾಕಷ್ಟು ಮನೆಗಳಿದ್ದು, ಇದರ ದುರ್ವಾಸನೆಯಿಂದಾಗಿ ಸುತ್ತಮುತ್ತಲಿನ ಜನರಿಗೆ ರೋಗದ ಭೀತಿ ಕಾಡುತಿದೆ.
ಗ್ರಾಮದ ಮುಖ್ಯ ರಸ್ತೆಯಲ್ಲಿ ಈ ಅವ್ಯವಸ್ಥೆ ಇದ್ದು ಇದನ್ನು ನೋಡಿದರೂ ಸಹ ಈ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ನಮಗೂ ಇದಕ್ಕೂ ಸಂಬಂಧ ಇಲ್ಲದ ಹಾಗೆ ನೋಡುತಿದ್ದಾರೆ
ರಾಜ್ಯವೇ ಮಾರಕ ರೋಗವಾದ ಡೆಂಗ್ಯೂ ರೋಗವನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದರೆ ಈ ಗ್ರಾಮದ ಗ್ರಾಮ ಪಂಚಾಯತಿ ಅಧಿಕಾರಿಗಳು ಮತ್ತು ಸದಸ್ಯರು ನಮಗೂ ಇದಕ್ಕೂ ಸಂಬಂಧವೇ ಇಲ್ಲ ಎಂಬಂತೆ ವರ್ತಿಸುತ್ತಿದಾರೆ.
ಈ ಕೂಡಲೇ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈ ಗ್ರಾಮದ ಕಡೆ ಗಮನ ಹರಿಸಿ ಜನರ ಆರೋಗ್ಯ ಕಾಪಾಡಬೇಕು.
ಮುಗಿಯದ ಸಮಸ್ಯೆ: ಇಲ್ಲಿನ ರಸ್ತೆಯಲ್ಲಿ ಅನೇಕ ತಿಂಗಳಿನಿಂದಲೂ ಸಮಸ್ಯೆ ಹೀಗೆ ಇದ್ದು, ಈ ಬಗ್ಗೆ ಗ್ರಾ.ಪಂ. ಅಧಿಕಾರಿಗಳು ನೋಡಿದರೂ ನೋಡದಂತೆ ಹೋಗುತ್ತಿದ್ದು, ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ದುರಂತ ಸಂಗತಿ ಎಂದು ಜನರ ಕಿಡಿಕಾರಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


