ತಾಯಿಯೊಬ್ಬಳು ಮಗನನ್ನು ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಯಲಂಕದ RNZ ಅಪಾರ್ಟ್ಮೆಂಟ್ ನಲ್ಲಿ ಈ ಘಟನೆ ನಡೆದಿದೆ. ತಾಯಿ ರಮ್ಯಾ (40) ಎಂಬಾಕೆಯೇ ತನ್ನ ಮಗ ಭಾರ್ಗವ್ (13)ನನ್ನು ಕೊಲೆ ಮಾಡಿ ಬಳಿಕ ತಾನು ಕೂಡ ನೇಣಿಗೆ ಶರಣಾಗಿದ್ದಾಳೆ.
ಮೂರು ತಿಂಗಳ ಹಿಂದೆ ರಮ್ಯಾ ಪತಿ ಶ್ರೀಧರ್ ಕ್ಯಾನ್ಸರಿಂದ ಮೃತಪಟ್ಟಿದ್ದರು. ಹೀಗಾಗಿ ಈ ಘಟನೆಯಿಂದ ರಮ್ಯಾ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಪುತ್ರನನ್ನು ಮೊದಲು ಕೊಲೆಗೈದು ನಂತರ ರಮ್ಯ ನೇಣಿಗೆ ಶರಣಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


