ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ಪತ್ರಕರ್ತ ಪಿ. ರಾಜೇಶ್ ರವರನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಎಂ.ಕೃಷ್ಣಯ್ಯ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಇತ್ತೀಚೆಗೆ ಬೆಂಗಳೂರಿನ ಶಾಸಕರ ಭವನದಲ್ಲಿ ನಡೆದ ರಾಜ್ಯದ 50 ಮೂಲಬುಡಕಟ್ಟುಗಳ ಮುಖಂಡರು ಮತ್ತು ಸಂಘದ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಹಾಲಿ ಆದಿವಾಸಿರಕ್ಷಣಾ ಪರಿಷತ್ ನ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಪಿ.ರಾಜೇಶ್ ರವರನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು ಎಂದಿದ್ದಾರೆ.
ಕಳೆದ 6 ವರ್ಷಗಳಿಂದ ಆದಿವಾಸಿ ರಕ್ಷಣಾ ರಿಷತ್ ನ ಜಿಲ್ಲಾಧ್ಯಕ್ಷರಾಗಿ ಜಿಲ್ಲೆಯ ಆದಿವಾಸಿಗಳ ಪರವಾಗಿ ಕಾರ್ಯನಿರ್ವಹಿಸುವುದರೊಂದಿಗೆ ರಾಜ್ಯ ಸಂಘಟನೆಯ ಕಾರ್ಯಕ್ರಮಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸುವ ಮೂಲಕ ಶಕ್ತಿ ತುಂಬಿರುವುದನ್ನು ಪರಿಗಣಿಸಿ ಈ ಆಯ್ಕೆ ಮಾಡಲಾಗಿದೆ ಎಂದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


