ತುಮಕೂರು: ಇಂದು ಬೆಳಗ್ಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ಮಕ್ಕಳ ಶೈಕ್ಷಣಿಕ ಪ್ರಗತಿ ಪರಿಶೀಲನೆ ನಡೆಸಿದರು.
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳ ಬಳಿ ತೆರಳಿದ ಜಿಲ್ಲಾಧಿಕಾರಿ ಪಠ್ಯದ ಕುರಿತಾದ ಕೆಲ ಅಂಶಗಳನ್ನು ಮಕ್ಕಳಿಗೆ ಕೇಳಿದರು. ಈ ಕುರಿತಂತೆ ವಿದ್ಯಾರ್ಥಿಗಳು ಸಹ ಸಮರ್ಪಕ ಉತ್ತರ ನೀಡಿದರು.
ಅಲ್ಲದೆ ಕೇವಲ ವಿದ್ಯಾಭ್ಯಾಸದ ಕಡೆ ಗಮನಹರಿಸಿ ಅನುಮಾನ ಬಂದ ನಂತರ ಅದನ್ನು ಗುರುತು ಮಾಡಿಕೊಂಡು ಶಿಕ್ಷಕರ ಬಳಿ ಅದನ್ನು ಪರಿಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಅಲ್ಲದೆ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಯಾವುದೇ ರೀತಿಯ ಸಮಸ್ಯೆಗಳಿದ್ದಲ್ಲಿ ತಮ್ಮ ಗಮನಕ್ಕೆ ತರುವಂತೆಯೂ ಕೂಡ ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA