ಹೆಚ್.ಡಿ.ಕೋಟೆ: ತಾಲೂಕಿನ ಹೆಚ್. ಮಟಕೆರೆ ಗ್ರಾಮದ ನಿವಾಸಿಗಳಾದ ಜಯಮ್ಮ ಕೋಂ ಸೋಮನಾಯಕ ಎಂಬುವವರ ಮನೆಯು ತುಂಬಾ ದಿನದಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಕುಸಿದು ಬಿದ್ದಿದ್ದು, ಪರಿಣಾಮವಾಗಿ ಮನೆಯಲ್ಲಿದ್ದ ಸೋಮನಾಯಕ ರವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಘಟನೆಯಿಂದಾಗಿ ಮನೆಯ ಹೆಂಚು, ಮನೆಯ ಸಾಮಗ್ರಿಗಳಿಗೆ ಹಾನಿಯಾಗಿದೆ. ಸ್ಥಳಕ್ಕೆ ಆಗಮಿಸಿದ ಗ್ರಾಮಲೆಕ್ಕಾಧಿಕಾರಿ ಸರ್ಕಾರದಿಂದ ಬರುವ ಸಹಾಯಧನವನ್ನು ಬಿಡುಗಡೆ ಮಾಡಿಸಿ ಕೊಡುತ್ತೇವೆ ಎಂದಿದ್ದಾರೆ.
ಇದೇ ವೇಳೆ ಸೋಮನಾಯಕ ಅವರು, ನಾನು ತುಂಬಾ ಬಡವನಾಗಿದ್ದು, ನನಗೆ ವಾಸಿಸಲು ಮನೆ ಇಲ್ಲ, ಗ್ರಾಮ ಪಂಚಾಯತಿ ವತಿಯಿಂದನೂ ನನಗೆ ಮನೆ ಆಗಿಲ್ಲ, ಸರ್ಕಾರದ ಸಹಾಯಧನದ ಬದಲು ನನಗೆ ಮನೆ ನಿರ್ಮಿಸಿ ಕೊಡಬೇಕು ಮನವಿ ಮಾಡಿಕೊಂಡರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


