ಸಿಲಿಕಾನ್ ಸಿಟಿಯ ಹೆಚ್ಚು ಟ್ರಾಫಿಕ್ ಜಾಮ್ ಪೀಡಿತ ರಸ್ತೆಗಳಲ್ಲಿ ಏರ್ ಪೋರ್ಟ್ ರೋಡ್ ಕೂಡ ಒಂದು. ಎಷ್ಟು ನಿಯಮಗಳನ್ನು ಹಾಕಿದರೂ ಕೂಡ ಅಪಘಾತ ಮತ್ತು ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳು ವರದಿಯಾಗುತ್ತಲೇ ಇವೆ. ಇದೇ ವೇಳೆ ಸಂಚಾರ ಪೊಲೀಸರು ಹೊಸ ರೂಲ್ಸ್ ಹಾಕಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣ ರಸ್ತೆಯಲ್ಲಿ ಲೇನ್ ಅಶಿಸ್ತು ನಿವಾರಿಸಲು, ಲೇನ್ ನಿಯಮಗಳನ್ನು ಅನುಸರಿಸದವರಿಗೆ ದಂಡ ವಿಧಿಸಲಾಗುವುದು ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ವಾಹನಗಳ ವೇಗದಿಂದಾಗಿ ವಿಮಾನ ನಿಲ್ದಾಣದ ರಸ್ತೆಯಲ್ಲಿ ಅನೇಕ ಅಪಘಾತಗಳು ವರದಿಯಾದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ಬೆಂಗಳೂರು ನಗರ ಪೊಲೀಸ್ ವ್ಯಾಪ್ತಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ರಸ್ತೆ (ಬಿಬಿ ರಸ್ತೆ — ಎನ್ ಎಚ್ -44) ನಲ್ಲಿರುವ ಎಲ್ಲಾ ವಾಹನಗಳ ಚಾಲಕರು ತಮ್ಮ ವಾಹನಗಳನ್ನು ನಿಗದಿತ ಲೇನ್‌ನಲ್ಲಿ ಚಲಾಯಿಸಬೇಕು ಎಂದು ಬೆಂಗಳೂರು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಚಾರ ನಿಯಮಗಳನ್ನು ಉಲ್ಲಂಘಿಸುವವರಿಗೆ ತಪ್ಪದೆ ದಂಡ ವಿಧಿಸಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.
ಎಲ್ಲಾ ಭಾರೀ ವಾಹನಗಳು, ಟ್ರಕ್ ಗಳು ಮತ್ತು ದ್ವಿಚಕ್ರ ವಾಹನಗಳು ಗಂಟೆಗೆ 50 ಕಿಲೋಮೀಟರ್ ವೇಗವನ್ನು ದಾಟಬಾರದು. ಆದರೆ, ಕಾರುಗಳು ಗಂಟೆಗೆ 80 ಕಿಲೋಮೀಟರ್ ವೇಗದಲ್ಲಿ ಚಲಾಯಿಸಬಹುದು. ಅದಕ್ಕಿಂತ ಹೆಚ್ಚು ವೇಗಕ್ಕೆ ಅನುಮತಿಸುವುದಿಲ್ಲ. ನಿಗದಿತ ಮಾರ್ಗದಲ್ಲಿ ಸಂಚರಿಸದವವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


