ಔರಾದ: ಹಿಂದೂ – ಮುಸ್ಲಿಂ ಭಾವೈಕ್ಯತೆಯ ಸಂಕೇತವಾದ ಮೊಹರಂ ಹಬ್ಬವನ್ನು ಔರಾದ ತಾಲೂಕಿನ ಬೆಳಕುಣಿ ಚೌಧರಿ ಗ್ರಾಮಸ್ಥರು ಹಾಗೂ ಮಾಹಾರಾಜವಾಡಿಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಹಲವು ವರ್ಷಗಳಿಂದಲೂ ನಡೆದುಕೊಂಡ ಬಂದ ಸಂಪ್ರದಾಯದಂತೆ ಅಲಾವಿ ಕುಣಿತ , ಮಜುನು ಕುಣಿತ , ಪೈತ್ರಿ ಪದ , ಹಾಡುತ ಕುಣಿಯುತ ಗ್ರಾಮದ ಜನರು ಶ್ರದ್ಧಾ ಭಕ್ತಿಯಿಂದ ತಮ್ಮ ಇಷ್ಠಾರ್ಥಗಳನ್ನು ದೇವರಲ್ಲಿ ಪ್ರಾರ್ಥಿಸಿಕೊಂಡರು. ಹೂವಿನ ಹಾರ, ತೆಂಗಿನ ಕಾಯಿ , ಊದುಬತ್ತಿ, ಸಕ್ಕರೆ ಬೆಲ್, ಪಾನಕ ನೈವೇದ್ಯ ಪಿರ್ ದೇವರಿಗೆ ಅರ್ಪಿಸಿದರು.
ಈ ಮೋಹರಂ ಉತ್ಸವ ಹಿಂದು ಹಾಗೂ ಮುಸ್ಲಿಂ ಬಾಂಧವರಲ್ಲಿ ಸೌಹಾರ್ದತೆಗೆ ಸಾಕ್ಷಿಯಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸತ್ಯವತಿ ಪರಮೇಶ್ವರ ಮೆತ್ರೆ, ಗ್ರಾಮ ಪಂಚಾಯಿತಿ ಸದಸ್ಯರು ಕರಬಸಪ್ಪಾ ಸೊರಾಳೆ, ಮಾಜಿ ಗ್ರಾಮಪಂಚಾಯತ್ ಸದಸ್ಯರು ಎಂ. ಡಿ. ನಯೂಮ್, ಬಾಬು ಮಿಯಾಕ್ ಉರೇಶಿ, ಎಂ.ಡಿ. ಆರೀಫ್, ವೈಜಿನಾಥ ವಲ್ಲಾಪುರೆ, ನಾಮದೇವ ಭಂಡಾರ, ಮಾಜಿ ಗ್ರಾಪಂ ಅಧ್ಯಕ್ಷರು ದೇವಿದಾಸ ಧೋಳ ಹಾಗೂ ಊರಿನ ಹಿರಿಯರು ಭಾಗವಹಿಸಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


