nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ

    May 31, 2026

    ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ

    May 31, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ

    May 31, 2026
    Facebook Twitter Instagram
    ಟ್ರೆಂಡಿಂಗ್
    • ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
    • ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
    • ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
    • ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್‌ ಗೆ ಒತ್ತಾಯ
    • ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ
    • ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಾಶಿಂ ಬನ್ನೂರು ಅವರ ಅಂಕಣ ಬರಹ: ಏಕತೆಯ ಸಂದೇಶ ಸಾರುವ ಮುಹರ್ರಮ್ ಆಚರಣೆ
    ಲೇಖನ July 17, 2024

    ಹಾಶಿಂ ಬನ್ನೂರು ಅವರ ಅಂಕಣ ಬರಹ: ಏಕತೆಯ ಸಂದೇಶ ಸಾರುವ ಮುಹರ್ರಮ್ ಆಚರಣೆ

    By adminJuly 17, 2024No Comments3 Mins Read
    hashim bannur

     ಲೇಖನ: ಹಾಶಿಂ ಬನ್ನೂರು

     


    Provided by
    Provided by

    ಮುಹರಮ್ ತಿಂಗಳು ಮುಸ್ಲಿಮರ ಹೊಸ ವರ್ಷದ ಪ್ರಾರಂಭ ತಿಂಗಳು, ಈ ತಿಂಗಳಲ್ಲಿ ವಿಶೇಷವಾದ ಹಬ್ಬಗಳನ್ನು ಬಹಳ ವಿಜ್ರಂಬಣೆ ಭಯ ಭಕ್ತಿಯಿಂದ ಆಚರಿಸುತ್ತಾರೆ. ಮುಹರ್ರಮ್ ತಿಂಗಳ ಮೊದಲ ಹತ್ತು ದಿನಗಳು ವಿಶೇಷತೆಯ ದಿನಗಳಾಗಿವೆ. ಶಿಯಾ ಮುಸ್ಲಿಮರು ಆಚರಿಸುವ ಪ್ರಮುಖ ಹಬ್ಬ ಮುಹರ್ರಮ್ ಆಗಿದೆ. ಅಲ್ಲದೇ ಹಿಂದೂ ಮುಸ್ಲಿಮರು ಭಾವೈಕ್ಯತೆಯಿಂದಲೂ ಈ ಹಬ್ಬದಲ್ಲಿ ಪಾಲ್ಗೊಂಡು ಸೌಹಾರ್ದತೆಯಿಂದ ಆಚರಿಸಲಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಮುಹರಮ್ ಹಬ್ಬವನ್ನು ಬಾಬಯ್ಯ ಹಬ್ಬ ಎಂದು ಕರೆಯುತ್ತಾರೆ.

    ಮುಹರಮ್ ಒಂದು ತಿಂಗಳ ಹೆಸರಾಗಿದ್ದು ಇಸ್ಲಾಮಿಕ್ ಮುಸಲ್ಮಾನರ ಹಿಜರಿ ಕ್ಯಾಲೆಂಡರ್ ಪ್ರಕಾರ ಮೊದಲನೇ ತಿಂಗಳು. ಮುಸ್ಲಿಮರಿಗೆ ಇದು ಹೊಸ ವರ್ಷ ದುಖಃದಿಂದ ಗೌರವದಿಂದ ಮುಹರಮ್ ಹಬ್ಬವನ್ನು ಆಚರಿಸುತ್ತಾರೆ . ಮುಹರಮ್ ಎಂಬುವುದು ಅರೇಬಿಕ್ ಪದವಾಗಿದ್ದು “ನಿಷಿದ್ದ” ಎಂಬ ಅರ್ಥವನ್ನು ಸೂಚಿಸುತ್ತದೆ. ಈ ತಿಂಗಳಲ್ಲಿ ಯಾವುದೇ ರೀತಿಯ ಶುಭ ಕಾರ್ಯಗಳು ಮಾಡಲು ಸೂಕ್ತವಾಗಿರೂದಿಲ್ಲ. ಮುಹರಂ 9 ತಾಸೂಆ ಮತ್ತು 10 ನೇ ಆಶುರಾ ದಿನದಂದು ಉಪವಾಸವಿರೂದು ಮತ್ತು ಸತ್ಕರ್ಮಗಳನ್ನು ವೃದ್ಧಿ ಗೊಳಿಸೂದು ಮನೆ ಹಾಗೂ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಈ ತಿಂಗಳ ವಿಶೇಷತೆ.

    ಆದರೆ ಆಚಾರ ಕ್ಕಿಂತಲೂ ಅನಾಚಾರವು ಮುಹರಮ್ ಹೆಸರಿನಲ್ಲಿ ನಡೆಯೂದು ಬಹಳ ಖೇದಕರ ಹಾಗೂ ವಿಷಾದನೀಯ ಸಂಗತಿ. ಮುಹರಮ್ ತಿಂಗಳ ಆಚರಣೆಗೆ ಬಹಳ ದುಖಃಕರವಾದ ಸಂಗತಿ ಮತ್ತು ಐತಿಹಾಸಿಕ ಘಟನೆಗಳೂ ಇದೆ. ಪ್ರವಾದಿ ಪೈಗಂಬರ್ ಮುಹಮ್ಮದ್ ಮುಸ್ತಫಾ ಸ.ಅ ರವರ ಮಗಳಾದ ಫಾತಿಮಾ ಬೀವಿ ಹಾಗೂ ನಾಲ್ಕನೇ ಖಲೀಫರಾಗಿದ್ದ ಇಮಾಮ್ ಅಲಿ ರ.ಅ ಈ ದಂಪತಿಗಳ ಮಕ್ಕಳಾದ ಇಮಾಮ್ ಹಸನ್ ಮತ್ತು ಹುಸೈನ್ ದರ್ಮ ಪ್ರಚಾರಕ್ಕಾಗಿ ಶತ್ರುವಿನ ಮುಂದೆ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಹೋರಾಡಿ ಕರ್ ಬಲಾ ಮಣ್ಣಿನಲ್ಲಿ ಶಹೀದರಾದ ದಿನವಾಗಿದೆ ಮುಹರಮ್ ಹತ್ತು ಈ ಘಟನೆಯ ನೆನಪು ಮತ್ತು ಸ್ಮರಣೆಯೇ ಈ ಆಚರಣೆಯ ಪ್ರಮುಖ ಉದ್ದೇಶ. ಹಬ್ಬ ಎಂದ ಕೂಡಲೇ ಎಲ್ಲರೂ ಸಂತೋಷ ಮೂಡುತ್ತದೆ ಆದರೆ ಮೊಹರಂ ಹಬ್ಬದ ಆಚರಣೆ ದುಖಃದ ಪ್ರತೀಕ. ವರ್ಷಗಳ ಹಿಂದೆ ನಡೆದ ಒಂದು ದುರಂತ ಕಥೆಯೇ ಇದಕ್ಕೆ ಕಾರಣ.

    ಮುಹರಂ ತಿಂಗಳಲ್ಲಿ ಕೃತಜ್ಞತೆಯನ್ನು ಸಲ್ಲಿಸೂದು, ಶೋಕಾಚರಣೆಗಳಲ್ಲಿ ತೊಡಗಿಕೊಳ್ಳೋದು, ಮತ್ತು ಸಾರ್ವಜನಿಕ ಆಚರಣೆಗಳನ್ನು ಮಾಡುತ್ತಾರೆ, ಈ ವೇಳೆ ಆಲಾಯಿ ಕುಣಿತ, ಮುಹರಮ್ ಪದಗಳು ಹಾಡುವುದು, ದೇವರ ಕುಣಿತ, ಬೆಂಕಿಯಲ್ಲಿ ನಡೆದಾಡುವುದು ಸೇರಿದಂತೆ ಕೆಲವು ಆಚರಣೆಯನ್ನು ಮಾಡಲಾಗುತ್ತೆ. ಮುಹರಮ್ ಹೆಸರಿನಲ್ಲಿ ನಡೆಯುವ ಈ ಎಲ್ಲಾ ಆಚರಣೆಗಳು ಸಾಂಪ್ರದಾಯಿಕವಾಗಿ ನಡೆಸಲ್ಪಡುತ್ತಾ ಬಂದಿದೆ ಹೊರತು ಇದಕ್ಕೆ ಯಾವುದೇ ಧಾರ್ಮಿಕವಾದ ಪುರಾವೆಗಳು ಇಲ್ಲ. ನಮ್ಮ ನಾಡಿನ ಹಲವೆಡೆ ಜಾತಿ ಮತ ಧರ್ಮ ಬೇಧವಿಲ್ಲದೆ ಎಲ್ಲರೂ ಒಟ್ಟಾಗಿ ಮುಹರಮ್ ಆಚರಿಸೂದು ಬಹಳ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಒಂದು ಪದ್ಧತಿ ಇದನ್ನು ಶಾಂತಿ ಸೌಹಾರ್ದತೆಯ ಸಂಕೇತ ಎಂದರೂ ತಪ್ಪಾಗಲಾರದು.

    ರಾಯಚೂರ ಜಿಲ್ಲೆಯ ಮುದಗಲ್ಲ ಗ್ರಾಮದಲ್ಲಿ ಮೊಹರಂ ಆಚರಣೆಯಲ್ಲಿ ಮುಸ್ಲಿಮೇತರರೇ ಹೆಚ್ಚಾಗಿ ಭಾಗವಹಿಸುತ್ತಾರೆ. ಹರಕೆ ಹೊತ್ತ ಹಿಂದೂ- ಮುಸ್ಲಿಮರು ಹುಲಿ ವೇಷ, ಅಳ್ಳಳ್ಳಿ ಬಪ್ಪಾ ವೇಷ ಹಾಕಿ ಕುಣಿದು ಕುಪ್ಪಳಿಸುತ್ತಾರೆ. ಕಂದೂರಿ ಮಾಡಿ ಎಡೆ ನೀಡಿ ಮನಸ್ಸಿಗೆ ನೆಮ್ಮದಿ ತಂದುಕೊಳ್ಳುತ್ತಾರೆ. ದೀರ್ಘ ದಂಡ ನಮಸ್ಕಾರ ಹಾಕಿ ಧನ್ಯರಾಗುತ್ತಾರೆ. ಹತ್ತನೆಯ ದಿನ ಹೊರಡುವ ಕಾಸೀಮ ಅಲಂ ಮತ್ತು ಹಸನ ಅಲಂ ಒಂದಕ್ಕೊಂದು ಭೇಟಿಯಾದಾಗ ನೆರೆದ ಜನ ಸಾಮೂಹ ತೇರಿನ ಮೇಲೆ ಹಣ್ಣುಕಾಯಿ ಎಸೆಯುವಂತೆ ಸೂರ ಮಾಡಿ ಭಯ ಭಕ್ತಿಯಿಂದ ಕೈಮುಗಿದು ತೃಪ್ತರಾಗುತ್ತಾರೆ. ಹಿಂದುಗಳ ಜಾತ್ರೆಯ ಸಂಭ್ರಮವನ್ನು ನೆನಪಿಸುವ ಮುದಗಲ್ಲ ಮುಹರಂ ಪ್ರಚಲಿತವಾಗಿದೆ.

    ಹೊಸಪೇಟೆಯ ರಾಮುಲಸ್ವಾಮಿ ಇಂದಿಗೂ ಸರ್ವರ ಇಷ್ಟಾರ್ಥಗಳನ್ನು ಪೂರೈಸುವ ಪುಣ್ಯಕ್ಷೇತ್ರೋತ್ಸವವೆಂದೇ ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ಕೂಡಿಸುವ ಮೌಲಾಲಿ ಅಲಮ್ ಗಳಿಗೆ ಹಿಂದೂ ಮುಸ್ಲಿಮರು ರಾಮುಲಸ್ವಾಮಿ ಎಂದೇ ಕರೆಯುತ್ತಾರೆ. ಒಂಬತ್ತನೆಯ ದಿನ ರಾತ್ರಿ ಎಡೆ ಕೊಡುವಾಗ ಉಪ್ಪನ್ನು ಒಯ್ದು ಅಲಾವಿಯಲ್ಲಿ ಚೆಲ್ಲಿ ಹುರುಕು ‘ಕಜ್ಜಿಗಳನ್ನು ವಾಸಿ ಮಾಡಿಕೊಳ್ಳುತ್ತಾರೆ.
    ಕೋಲಾರ ಜಿಲ್ಲೆಯ ನಾಗಸಂದ್ರದ ಮೊಹರಂ ಬಾಬಯ್ಯನ ಹಬ್ಬವೆಂದೇ ಪ್ರಸಿದ್ದಿ ಪಡೆದಿದೆ. ಧಾರವಾಡ ಜಿಲ್ಲೆಯ ಯರಗುಪ್ಪಿ ಗ್ರಾಮದ ಮೊಹರಂ ಸುತ್ತ ಹತ್ತು ಹಳ್ಳಿಗಳಲ್ಲಿ ಮುಹರಮ್ ಜಾತ್ರೆಯೆಂದೇ ಹೆಸರಾಗಿದೆ. ಊರಿನ ಹಿಂದೂ-ಮುಸ್ಲಿಮರು ವಿಶೇಷವಾಗಿ ಬ್ರಾಹ್ಮಣರು ತಮ್ಮ ಶಕ್ತಾನುಸಾರ ದೇವರ ಚಾಕರಿ ಮಾಡುತ್ತಾರೆ. ಹರಕೆ ತೀರಿಸುತ್ತಾರೆ.

    ಗದಗ ಬೆಟಗೇರಿಯಲ್ಲಿ ನಡೆಯುವ ಮುಹರಮ್ ಮೆರವಣಿಗೆಯಲ್ಲಿ ಹಿಂದೂ ಮುಸ್ಲಿಂ ಭಕ್ತರು ಪಾಲ್ಗೊಂಡು ಮೈ ತುಂಬಿದ ದೇವರಿಂದ ಮಳೆ ಬೆಳೆ ಕುರಿತು ಹೇಳಿಕೆ- ಕೇಳಿಕೆ ಮಾಡುತ್ತಾರೆ. ಸೊಟಕನ ಹಾಳದ ಡೋಲಿ ಮತ್ತು ಕೈ ದೇವರು ದ್ಯಾಮವ್ವನ ಗುಡಿಗೆ ಭೇಟಿಯಿತ್ತಾಗ ಊರ ಜನ ಇಮಾಮ ಹುಸೇನರು ತಂಗಿ ದ್ಯಾಮವ್ವನ ದರ್ಶನಕ್ಕೆ ಬಂದಿದ್ದಾರೆಂದೇ ತಿಳಿಯುತ್ತಾರೆ. ಹೀಗೆ ರಾಜ್ಯದ ಹಲವು ಗ್ರಾಮ ಪ್ರದೇಶಗಳಲ್ಲಿ ಮತ್ತು ದೇಶ ವಿದೇಶಗಳಲ್ಲಿ ಮುಹರಮ್ ಆಚರಣೆಯು ವಿಜೃಂಭಣೆಯಿಂದ ಆಚರಿಸುತ್ತಾರೆ.

    ಒಟ್ಟಿನಲ್ಲಿ ಮುಹರಮ್ ಆಚರಣೆಯ ಹೆಸರಿನಲ್ಲಿ ನಡೆಯುವ ಅನಾಚಾರಗಳು ಅನಾಹುತಗಳಿಗೆ ಕಾರಣವಾಗದಿರಲಿ ಶಾಂತಿ ಸೌಹಾರ್ದತೆ ಸಂತೋಷ ಸಾರೂದೇ ಎಲ್ಲಾ ಹಬ್ಬದ ಮೂಲ ಉದ್ದೇಶ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಮೂರ್ಖರು ಯಾರು? | ರಚನೆ: ವೇಣುಗೋಪಾಲ್, ತುಮಕೂರು

    May 27, 2026

    ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?

    May 25, 2026

    “ರಕ್ಕಿ” ಚಿತ್ರದ ಮೊದಲ ಹಾಡು “ರಗಡೋ ರಕ್ಕಿ” ಬಿಡುಗಡೆ | ನಾಯಕನ ಹೆಸರೆ ಸಿನಿಮಾ ಶೀರ್ಷಿಕೆಯಾಗಿರುವುದು ವಿಶೇಷ

    May 19, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ

    May 31, 2026

    ಕೊರಟಗೆರೆ: ಬಿಜೆಪಿ ಪಕ್ಷದ ಕೊರಟಗೆರೆ ಮಂಡಲದ ಸಂಘಟನಾತ್ಮಕ ಹಿತದೃಷ್ಟಿಯಿಂದ ಬಿಜೆಪಿ ಮಂಡಲದ ವಿವಿಧ ಪದಾಧಿಕಾರಿಗಳ ಆಯ್ಕೆಯನ್ನು ನೂತನವಾಗಿ ಮಾಡಲಾಗಿದೆ ಎಂದು…

    ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ

    May 31, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ

    May 31, 2026

    ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ

    May 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.