ಔರಾದ: ಇಲ್ಲಿಯ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜು.19ರಂದು ಬೆಳಗ್ಗೆ 10:30 ಗಂಟೆಗೆ ಕರ್ನಾಟಕ ಕಾಯ೯ನಿರತ ಪತ್ರಕರ್ತರ ಸಂಘದ ತಾಲೂಕು ಘಟಕದಿಂದ ಪತ್ರಿಕಾ ದಿನಾಚರಣೆ ಹಮ್ಮಿಕೊಳ್ಳಲಾಗಿ ದೆ ಎಂದು ಸಂಘದ ತಾಲೂಕು ಅಧ್ಯಕ್ಷ ಶಿವಾನಂದ ಮೊಕ್ತದಾರ್ ತಿಳಿಸಿದ್ದಾರೆ.
ಬಸವಕಲ್ಯಾಣದ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು, ಹಿರೇಮಠ ಸಂಸ್ಥಾನದ ಶ್ರೀಗಳಾದ ಗುರುಬಸವ ಪಟ್ಟದ್ದೇವರು ಸಾನಿಧ್ಯ ವಹಿಸುವರು. ಸಂಸದ ಸಾಗರ ಖಂಡ್ರೆ ಉದ್ಘಾಟಿಸುವರು. ಶಾಸಕ ಪ್ರಭು ಚವ್ಹಾಣ ಸಸಿ ನೆಡುವ ಮೂಲಕ ಚಾಲನೆ ನೀಡುವರು.
ತಹಶೀಲ್ದಾರ್ ಮಲ್ಲಿಶೆಟ್ಟಿ ಚಿದ್ರೆ, ತಾ ಪಂ ಇಓ ಬಿರೇಂದ್ರಸಿಂಗ್ ಠಾಕೂರ್, ಸಹಾಯಕ ನಿದೇ೯ಶಕ ಶಿವಕುಮಾರ ಘಾಟೆ, ಸಿಪಿಐ ರಘುವೀರಸಿಂಗ್ ಠಾಕೂರ್ ಮತ್ತಿತರ ಗಣ್ಯರು ಪಾಲ್ಗೊಳ್ಳುವರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


