ಬೆಂಗಳೂರು–ಕಲಬುರಗಿ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭವಾಗಿದೆ. ಈ ಮಾರ್ಗದ ರೈಲಿಗೆ ಪ್ರಯಾಣಿಕರಿಂದಲೂ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.
ರೈಲಿಗೆ ಮತ್ತೊಂದು ನಿಲುಗಡೆ ನೀಡಲು ಈಗ ಭಾರತೀಯ ರೈಲ್ವೆ ಒಪ್ಪಿಗೆ ನೀಡಿದೆ.
ಬೆಂಗಳೂರು– ಕಲಬುರಗಿ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಯಾದಗಿರಿಯಲ್ಲಿ ನಿಲ್ಲಿಸಬೇಕು ಎಂದು ಬೇಡಿಕೆ ಇಡಲಾಗಿತ್ತು. ಈಗ ಯಾದಗಿರಿಯಲ್ಲಿ ವಂದೇ ಭಾರತ್ ರೈಲು ನಿಲುಗಡೆ ದಿನಾಂಕ ಘೋಷಣೆ ಮಾಡಲಾಗಿದೆ. ಜುಲೈ 20 ರಿಂದ ಬೆಂಗಳೂರು ನಗರದ ಸರ್. ಎಂ. ವಿಶ್ವೇಶ್ವರಯ್ಯ ಟರ್ಮಿನಲ್-ಕಲಬುರಗಿ ನಡುವಿನ ರೈಲು ಯಾದಗಿರಿಯಲ್ಲಿ ನಿಲ್ಲಲಿದೆ.
ವಂದೇ ಭಾರತ್ ರೈಲನ್ನು ಯಾದಗಿರಿಯಲ್ಲಿ ನಿಲ್ಲಿಸುವ ಕುರಿತು ರಾಯಚೂರು ಸಂಸದ ಜಿ. ಕುಮಾರ್ ನಾಯಕ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಕಲಬುರಗಿ-ಎಸ್‌ಎಂವಿ ಬೆಂಗಳೂರು ನಡುವೆ ರೈಲು ಸಂಖ್ಯೆ 22231 ಮತ್ತು ಎಸ್‌ಎಂವಿ ಬೆಂಗಳೂರು-ಕಲಬುರಗಿ ನಡುವೆ ರೈಲು ಸಂಖ್ಯೆ 22232 ರೈಲು ಸಂಚಾರ ನಡೆಸುತ್ತಿದೆ. ಗುರುವಾರ ಹೊರತುಪಡಿಸಿ ವಾರದ ಎಲ್ಲಾ ದಿನಗಳ ಕಾಲ ವಂದೇ ಭಾರತ್ ರೈಲು ಸಂಚರಿಸುತ್ತದೆ. ಈಗ ರೈಲು ಯಾದಗಿರಿಯಲ್ಲಿ ನಿಲುಗಡೆಗೊಳ್ಳುವುದರಿಂದ ಯಾದಗಿರಿಯ ಜನರಿಗೂ ಅನುಕೂಲವಾಗಲಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA