ಔರಾದ: ಕರ್ನಾಟಕ ಮೀಡಿಯಾ ಜರ್ನಲಿಸ್ಟ್ ಯೂನಿಯನ್ ಔರಾದ ತಾಲೂಕು ವತಿಯಿಂದ ಜುಲೈ 20ರ ಶನಿವಾರ ಪಟ್ಟಣದ ತಾಲೂಕು ಪಂಚಾಯತ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಯೂನಿಯನ್ ತಾಲೂಕು ಅಧ್ಯಕ್ಷ ಸಂತೋಷ ಚಾಂಡೇಶ್ವರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಳೆ ನಡೆಯುವ ಕಾರ್ಯಕ್ರಮದ ದಿವ್ಯ ಸಾನಿಧ್ಯ ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದೇವರು ಹಾಗೂ ಹಣೇಗಾಂವ ಶಂಕರಲಿಂಗ ಶಿವಾಚಾರ್ಯ ಸ್ವಾಮಿಜಿಗಳು ವಹಿಸಲಿದ್ದಾರೆ.
ಕಾರ್ಯಕ್ರಮದ ಉದ್ಘಾಟನೆ ಶಾಸಕ ಪ್ರಭು ಚವ್ಹಾಣ,ಅಧ್ಯಕ್ಷ ಕರ್ನಾಟಕ ಮೀಡಿಯಾ ಜರ್ನಲಿಸ್ಟ್ ಯೂನಿಯನ್ ರಾಜ್ಯಾಧ್ಯಕ್ಷ ಚಂದ್ರಶೇಖರ ಜಿ., ಮುಖ್ಯ ಅತಿಥಿಗಳಾಗಿ ಭಾಲ್ಕಿ ಡಿವೈಎಸ್ ಪಿ ಶಿವಾನಂದ ಪವಾಡಶೆಟ್ಟಿ, ಸ್ವಾಮಿ ನಕಿರೆಕಂಟಿ, ತಹಶೀಲ್ದಾರ ಮಲ್ಲಶೆಟ್ಟಿ ಚಿದ್ರೆ, ಇಒ ಬಿರೇಂದ್ರಸಿಂಗ್ ಠಾಕೂರ್, ತಾಪಂ ಎಡಿ ಶಿವಕುಮಾರ ಘಾಟೆ, ಅನೀಲಕುಮಾರ ದೇಶಮುಖ ಹಿರಿಯ ಪತ್ರಕರ್ತರು, ವಿಶೇಷ ಉಪನ್ಯಾಸ ಸದಾನಂದ ಜೋಶಿ ಹಿರಿಯ ಸಂಪಾದಕರು, ಪ್ರಾಸ್ತಾವಿಕ ನುಡಿ ಸಂತೋಷ ಚಾಂಡೇಶ್ವರೆ ಮಾಡಲಿದ್ದಾರೆ.
ವಿವಿಧ ಸಂಸಘ ಸಂಸ್ಥೆಯ ಮುಖಂಡರು ಸಾರ್ವಜನಿಕರು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮಕ್ಕೆ ಹೆಚ್ಚಿನ ಸಂಕ್ಯೆಯಲ್ಲಿ ಬರುವಂತೆ ಚಾಂಡೇಶ್ವರೆ ಮನವಿ ಮಾಡಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


