ತುಮಕೂರು: ಹಾಸನದ ಗೊರೂರು ಹೇಮಾವತಿ ಜಲಾಶಯದಿಂದ ನಾಗಮಂಗಲ ಶಾಖಾ ವ್ಯಾಪ್ತಿಯ ಬಾಗೂರು ನವಿಲೆ ಮೂಲಕ ಹರಿದು ಬರುವ ಕಾಲುವೆಯ ವಿವಿಧ ಹಂತದ ಕಾಮಗಾರಿಯನ್ನು ಮಾಜಿ ಸೊಗಡು ಶಿವಣ್ಣ ಪರಿಶೀಲನೆ ನಡೆಸಿದರು.
ಮಲೆನಾಡು ಭಾಗದಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಗೊರೂರಿನ ಹೇಮಾವತಿ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.
ಡ್ಯಾಂನಲ್ಲಿ ಈಗಾಗಲೇ ಭಾರೀ ಪ್ರಮಾಣದಲ್ಲಿ ನೀರು ಸಂಗ್ರಹವಾಗಿದೆ. ಆದರೆ ನಾಲಾ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳ್ಳದೆ, ಇರುವುದರಿಂದ ಹೇಮಾವತಿ ನದಿ ನೀರನ್ನು ನಿರೀಕ್ಷಿತ ಪ್ರಮಾಣದಲ್ಲಿ ತುಮಕೂರು ಜಿಲ್ಲೆಗೆ ಹರಿಸುವುದು ವಿಳಂಬವಾಗಲಿದೆ ಎಂದು ಸೊಗಡು ಶಿವಣ್ಣ ಇದೆ ವೇಳೆ ತಿಳಿಸಿದರು.
ಕಾಮಗಾರಿಯು ಪೂರ್ಣಗೊಳ್ಳದೆ ಇರುವುದರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಸರ್ಕಾರ ಕೂಡಲೇ ಕಾಮಗಾರಿ ಪೂರ್ಣಗೊಳಿಸಲು ಮುಂದಾಗುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಹೋರಾಟ ಸಮಿತಿಯ ಪಂಚಾಕ್ಷರಯ್ಯ, ಗೋವಿಂದರಾಜು, ತಿಪಟೂರು ನಗರಸಭಾ ಮಾಜಿ ಸದಸ್ಯ ಎಂ.ಪಿ.ಪ್ರಸನ್ನಕುಮಾರ್ ಮತ್ತಿತರರು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


