ಪಾವಗಡ: ತುಮಕೂರು ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ದಿನೇ ದಿನೇ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದಕ್ಕೆ ಸಂಬಂಧಪಟ್ಟಂತೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆಯಿಂದ ಗ್ರಾಮಗಳಲ್ಲಿ ನೈರ್ಮಲ್ಯವನ್ನು ಕಾಪಾಡುವಂತೆ ಸೂಚನೆ ನೀಡಿದರು ಸಹ ಪಾವಗಡ ತಾಲೂಕಿನ ಜೆ.ಅಚ್ಚಮ್ಮನಹಳ್ಳಿ ಗ್ರಾಮ ಪಂಚಾಯಿತಿಯ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಬಲ್ಲೇನಹಳ್ಳಿ ಗ್ರಾಮದಲ್ಲಿ ಡೆಂಗ್ಯೂ ಹರಡುವ ಭೀತಿ ಎದುರಾಗಿದೆ.
ಸಮರ್ಪಕವಾದ ಚರಂಡಿ ವ್ಯವಸ್ಥೆ ಇಲ್ಲದೆ ಇರುವುದರಿಂದ ರಸ್ತೆಯಲ್ಲಿಯೇ ಗಲೀಜು ನೀರು ಹರಿಯುತ್ತಿದ್ದು ಇದರಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ .
ಈ ಬಗ್ಗೆ ಗ್ರಾಮದ ಅಶೋಕ್ , ನಾಗರಾಜು, ಬಿ ಎಂ ರಾಮು, ಸುಬ್ಬರಾಯಪ್ಪ ಮಾತನಾಡಿ, ನಮ್ಮ ಗ್ರಾಮದಲ್ಲಿ ಸಮರ್ಪಕವಾದ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆ ಹಾಳಾಗುತ್ತಿದೆ, ಈ ಬಗ್ಗೆ ಜನಪ್ರತಿನಿಧಿಗಳಿಗೆ ಹಾಗೂ ಜೆ.ಅಚ್ಚಮ್ಮನಹಳ್ಳಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳಿಗೆ ಎಷ್ಟೇ ಬಾರಿ ಮಾಹಿತಿ ನೀಡಿದರು ಕ್ಯಾರೆ ಎನ್ನುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA