ಕಾಲೇಜು ವಿದ್ಯಾರ್ಥಿನಿಯನ್ನು ಆರೋಪಿಗಳು ಅಪಹರಿಸಿ ಹೋಟೆಲ್ ವೊಂದರಲ್ಲಿ ಸೆರೆವಾಸದಲ್ಲಿಟ್ಟು 12 ದಿನಗಳ ಕಾಲ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಗಾಜಿಯಾಬಾದ್ ನಲ್ಲಿ ವರದಿಯಾಗಿದೆ. ಬಾಲಕಿಯ ಮೇಲೆ ಮೀರತ್ ಹಾಗೂ ಜಮ್ಮು ಎಂಬ ಹೆಸರಿನ ಇಬ್ಬರು ಆರೋಪಿಗಳು ಹೋಟೆಲ್ ನಲ್ಲಿ ಅತ್ಯಾಚಾರ ಮಾಡಿದ್ದಾರೆ ಎನ್ನಲಾಗಿದೆ.
ಜೊತೆಗೆ ಬಾಲಕಿಯ ಅಶ್ಲೀಲ ವಿಡಿಯೋವನ್ನು ಕೂಡ ಮಾಡಿದ್ದಾರೆ. ಇದಾದ ಬಳಿಕ ಆಕೆಗೆ ಬೆದರಿಕೆ ಹಾಕಿದ್ದಾರೆ ಎಂದು ವರದಿ ತಿಳಿಸಿದೆ. ಈ ಘಟನೆಯ ಬಳಿಕ ಜುಲೈ 6 ರಂದು ಗಾಜಿಯಾಬಾದ್ ನ ಭೋಜ್ ಪುರ್ ಪೊಲೀಸ್ ಠಾಣೆ ಬಳಿ ಬಿಟ್ಟು ಹೋಗಿದ್ದಾರೆ ಎನ್ನಲಾಗಿದೆ. ಮೋದಿನಗರ ಎಂಬ ಗ್ರಾಮದ ನಿವಾಸಿಯಾಗಿರುವ ಬಾಲಕಿ ಇಲ್ಲಿನ ಕಾಲೇಜೊಂದರಲ್ಲಿ ಓದುತ್ತಿದ್ದಳು.
ಜೂನ್ 24ರಂದು ಕಾಲೇಜಿಗೆ ಹೋದವಳು ನಾಪತ್ತೆಯಾಗಿದ್ದಳು. ಕುಟುಂಬದವರು ಹುಡುಕಾಟ ನಡೆಸಿ, ನಾಪತ್ತೆ ಪ್ರಕರಣವನ್ನೂ ದಾಖಲಿಸಿದ್ದರು. ಇದೀಗ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾಳೆ. ಜೂನ್ 24ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ತನ್ನನ್ನು ಇಬ್ಬರು ಅಪಹರಿಸಿದ್ದರು ಎಂದು ಆಕೆ ದೂರಿನಲ್ಲಿ ತಿಳಿಸಿದ್ದಾಳೆ. ದೂರಿನ ಆಧಾರದ ಮೇಲೆ ಇದೀಗ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA