ಕೇಂದ್ರ ಸಚಿವ ವಿ.ಸೋಮಣ್ಣ ಅವರು ತಮ್ಮ 72ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.
ತಮ್ಮ ಪತ್ನಿ ಶೈಲಜಾ ಮತ್ತು ಮಗಳು ದಿವ್ಯಾ ಜೊತೆಯಲ್ಲಿ ಪೂಜೆ ಸಲ್ಲಿಸಿದರು. ನಂತರ ಶ್ರೀ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು.
ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ನನಗೆ ಟ್ವೀಟ್ ಮಾಡಿ ದೇಶದ ವ್ಯವಸ್ಥೆಗೆ ಭದ್ರಬುನಾದಿ ಹಾಕಲು ಸಂಕಲ್ಪ ತೊಡುವಂತೆ ಕರೆ ನೀಡಿದ್ದಾರೆ. ದೇಶದ ಅಭಿವೃದ್ಧಿಗೆ ನಿಮ್ಮ ಬುದ್ಧಿಶಕ್ತಿಯಿಂದ ಯಾವುದೇ ಸಮಸ್ಯೆಗಳು ಎದುರಾಗದಂತೆ ಸಮಸ್ಯೆಗಳನ್ನು ನಿವಾರಿಸುವಂತೆ ತಿಳಿಸಿದ್ದಾರೆ ಎಂದರು.
ಅಲ್ಲದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಇಂದು ಬೆಳಗ್ಗೆ ದೂರವಾಣಿ ಕರೆ ಮಾಡಿ ನಿಮಗೆ 73 ವರ್ಷವಾದರೂ ಕೂಡ ಜನಪರವಾಗಿ ಕೆಲಸ ಮಾಡುವಂತಹ ಶಕ್ತಿ ಹೊಂದಿದ್ದೀರಾ ಎಂದು ತಿಳಿಸಿ ಶುಭಾಶಯ ಕೋರಿದರು ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA