ಪಾವಗಡ: ಶುಕ್ರವಾರ ಪಾವಗಡ ತಾಲೂಕಿನ ಬಲ್ಲೇನಹಳ್ಳಿ ಗ್ರಾಮದಲ್ಲಿ ಸ್ವಚ್ಛತೆ ಕೊರತೆಯಿಂದ ಡೆಂಗ್ಯೂ ಹೊರಡುವ ಬೀದಿ ಹೆಚ್ಚಾಗಿರುವ ಬಗ್ಗೆ ನಮ್ಮ ತುಮಕೂರು ವಾಹಿನಿ ವರದಿಯ ಬೆನ್ನಲ್ಲೇ, ಎಚ್ಚೆತ್ತುಕೊಂಡ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತಕ್ಷಣದಲ್ಲಿ ಸಮಸ್ಯೆ ಪರಿಹಾರಕ್ಕೆ ಸೂಚನೆ ನೀಡಿದ್ದಾರೆ.
ವರದಿಯ ಬೆನ್ನಲ್ಲೇ ಪಾವಗಡ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಾನಕಿ ರಾಮ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಸಮಸ್ಯೆ ಬಗೆಹರಿಸುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿದ್ದಾರೆ.
ಜೊತೆಗೆ ಗ್ರಾಮಸ್ಥರ ಕೆಲ ಸಮಸ್ಯೆಗಳನ್ನ ಆಲಿಸಿ ಬಗೆಹರಿಸುವುದಾಗಿ ಇದೇ ವೇಳೆ ಅವರು ಭರವಸೆ ನೀಡಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA