ಬಂದೂಕಿನಿಂದ ಪತಿಯೇ ಪತ್ನಿಯನ್ನು ಗುಂಡಿಟ್ಟು ಕೊಂದ ಭಯಾನಕ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ಸಮೀಪದ ಬೆಟೋಳಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಶಿಲ್ಪಾ (36) ಎಂದು ಗುರುತಿಸಲಾಗಿದೆ. ಆರೋಪಿ ಪತಿ ನಾಯಕಂಡ ಬೋಪಣ್ಣ (45) ಎಂಬಾತ ಈ ಕೃತ್ಯವೆಸಗಿದ ಬಳಿಕ ಕೋವಿಯೊಂದಿಗೆ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ.
ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


