ಕೇರಳದ ಮಲಪ್ಪುರಂನಲ್ಲಿ ಬಾಲಕನೋರ್ವನಲ್ಲಿ ನಿಫಾ ವೈರಸ್ ಪತ್ತೆಯಾಗಿದ್ದು, ಆತಂಕ ಮೂಡಿಸಿದೆ. 14 ರ ಹರೆಯದ ಬಾಲಕನಲ್ಲಿ ಈ ಸೋಂಕು ದೃಢಪಟ್ಟಿದೆ.
ರಾಜ್ಯವು ಈ ಸಂಭವನೀಯ ವೈರಸ್ ಹರಡುವಿಕೆಯ ಬಗ್ಗೆ ಜಾಗರೂಕವಾಗಿರಬೇಕಾಗಿದೆ. ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ನಿಪಾ ವೈರಪ್ ತಡೆಯಲು ಬೇಕಾಗುವ ಕ್ರಮದ ಕುರಿತು ಚರ್ಚೆ ಮಾಡಲು ಉನ್ನತ ಮಟ್ಟದ ಸಭೆ ಕರೆದಿದ್ದಾರೆ.
ನಿಫಾ ಸೋಂಕಿತ ಬಾಲಕನನ್ನು ಕೋಯಿಕ್ಕೋಡ್ ಆಸ್ಪತ್ರೆಯ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಗೆನೇ ಬಾಲಕನ ಮನೆಯವರು ಮಾಸ್ಕ್ ಧರಿಸಲು ನಿರ್ದೇಶನ ನೀಡಲಾಗಿದೆ. ಬಾಲಕ ಭೇಟಿಗೆ ಯಾರಿಗೂ ಅವಕಾಶ ನೀಡಲಾಗಿಲ್ಲ, ಹಾಗೂ ಚಿಕಿತ್ಸೆ ಮುಂದುವರಿದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


