ಬೀದರ್ ಆನ್ ಲೈನ್ ಮಾರಾಟ ಯಾವತ್ತೂ ಮಾಡುವುದಿಲ್ಲ. ಅದರ ಸಾಧ್ಯತೆ ಇಲ್ಲ. ಮುಂದೆ ಕೂಡಾ ಇಲ್ಲ. ನಮ್ಮ ಯೋಚನೆಯಲ್ಲಿ ಆನ್ ಲೈನ್ ನಲ್ಲಿ ಮಾರಾಟವಿಲ್ಲ. ನೋ ಸ್ವಿಗ್ಗಿ, ನೋ ಜೊಮ್ಯಾಟೋ ಯಾವುದೂ ಇಲ್ಲ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಸ್ಪಷ್ಟನೆ ನೀಡಿದರು.
ಆನ್ ಲೈನ್ ನಲ್ಲಿ ಮದ್ಯ ಮಾರಾಟ ನಡೆಸಲು ಚಿಂತನೆ ನಡೆಸಲಾಗುತ್ತಿದೆ ಎನ್ನುವ ವರದಿಗಳ ಸಂಬಂಧ ಬೀದರ್ ನಲ್ಲಿ ಶನಿವಾರ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು.
ಶಾಲೆಯ ಸುತ್ತ, ಡಾಬಾ, ಅಂಗಡಿ ಸೇರಿದಂತೆ ಎಲ್ಲೆಂದರಲ್ಲಿ ಮದ್ಯ ಮಾರಾಟ ಮಾಡುವುದರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಈಗಾಗಲೇ ಡಿಸಿ, ಎಸ್ಪಿ, ಅವರಿಗೆ ಸೂಚನೆ ನೀಡಿದ್ದೇನೆ. ಮದ್ಯ ಸೇವನೆ ಮಾಡುವ ಗ್ರಾಹಕರ ಸಂಖ್ಯೆ ಹೆಚ್ಚಿದೆ. ಆದರೆ ಮದ್ಯದಂಗಡಿಗಳ ಸಂಖ್ಯೆ ಕಡಿಮೆಯಾಗಿದೆ, ಇದಕ್ಕಾಗಿ ಸಿಎಲ್–7 ಹೆಚ್ಚಿಗೆ ನೀಡಿದ್ದೇವೆ ಎಂದು ಅವರು ಹೇಳಿದ್ದಾರೆ.
ಹೊರಗಡೆ ಕುಡಿಯುವುದನ್ನು ನಿಯಂತ್ರಿಸುವುದಕ್ಕೆ ಪೊಲೀಸರಿಗೆ ಹೇಳಿದ್ದೇವೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


