ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ ವರುಣನ ಅಬ್ಬರ ಜೋರಾಗಿದ್ದು, ಹಲವಾರು ಸಾವು ನೋವುಗಳು ಸಂಭವಿಸಿವೆ. ಮಲೆನಾಡಿನಲ್ಲಿ ವರ್ಷಧಾರೆ ಮುಂದುವರಿದಿದ್ದು, ನದಿ, ಹಳ್ಳಗಳು ತುಂಬಿ ಹರಿಯುತ್ತಿವೆ.
ಶಿವಮೊಗ್ಗದ ವಿಶ್ವ ಪ್ರಸಿದ್ಧ ಜೋಗ ಜಲಪಾತ ಮೈದುಂಬಿ ಧುಮ್ಮಿಕ್ಕುತ್ತಿದೆ. ಜೋಗ ಜಲಪಾತ ವೀಕ್ಷಣೆಗೆಂದು ಆಗಮಿಸಿದ್ದ ಬೆಂಗಳೂರಿನಿಂದ ಯುವಕನೋರ್ವ ಜಲಪಾತದ ಬಳಿ ನಾಪತ್ತೆಯಾಗಿದ್ದಾನೆ.
ಮೂಲತಃ ಗದಗದ ಸದ್ಯ ಬೆಂಗಳೂರಿನಲ್ಲಿ ಟೀ ಅಂಗಡಿ ನಡೆಸುತ್ತಿರುವ ಆನಂದ್ (24) ಎಂಬಾತ ನಾಪತ್ತೆಯಾಗಿದ್ದಾನೆ. ಈತ ಜೋಗ ಜಲಪಾತ ವೀಕ್ಷಣೆಗೆ ಜುಲೈ 15ರಂದು ಆಗಮಿಸಿದ್ದ . ಯಾತ್ರಿ ನಿವಾಸದ ಸೀತಾಕಟ್ಟೆ ಬ್ರಿಡ್ಜ್ ಬಳಿಯಿಂದ ಬೇಲಿ ದಾಟಿ, ಜಲಪಾತದ ಬಳಿಗೆ ತೆರಳಿದ್ದಾನೆ ಬಳಿಕ ಆನಂದ್ ನಾಪತ್ತೆಯಾಗಿದ್ದು, ಕಳೆದ 7 ದಿನಗಳಿಂದ ಆತಗಾಗಿ ಕಾರ್ಗಲ್ ಠಾಣೆ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


