ನೋಡ ನೋಡುತ್ತಿದ್ದಂತೆಯೇ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದು ಕಾರಿನಲ್ಲಿದ್ದ ಇಬ್ಬರು ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ದೇವದಾನ ಎಸ್ಟೇಟ್ ಬಳಿ ಈ ಘಟನೆ ನಡೆದಿದೆ. ಘಟನೆಯಿಂದ ಕಾರಿನ ಮುಂಭಾಗ ಜಖಂ ಆಗಿದ್ದು, ವಿದ್ಯುತ್ ತಂತಿಗಳ ಮೇಲೆಯೇ ಬೃಹತ್ ಮರ ಬಿದ್ದ ಕಾರಣ ತಂತಿಗಳಿಗೂ ಹಾನಿಯಾಗಿವೆ.
ಚಲಿಸುತ್ತಿದ್ದ ಕಾರಿನ ಬೋನೆಟ್ ಮೇಲೆ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅದೃಷ್ಟವಶಾತ್ ಒಂದೇ ಒಂದು ಅಡಿ ದೂರ ಬಿದ್ದ ಕಾರಣ ಇಬ್ಬರ ಪ್ರಾಣ ಉಳಿದಿದೆ. ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


