ಹುಬ್ಬಳ್ಳಿಯ ಈಶ್ವರನಗರದ ಶ್ರೀ ವೈಷ್ಣೋದೇವಿ ದೇವಸ್ಥಾನದ ಧರ್ಮದರ್ಶಿ ದೇವೆಂದ್ರಪ್ಪ ಮಹಾದೇವಪ್ಪ ವನಹಳ್ಳಿ (63) ಕೊಲೆ ಮಾಡಿದ್ದ ಹಂತಕನನ್ನು ಪೊಲೀಸರು ಘಟನೆ ನಡೆದ 24 ಗಂಟೆಯೊಳಗೆ ಬಂಧಿಸಿದ್ದಾರೆ.
ಹುಬ್ಬಳ್ಳಿಯ ಕಮರಿಪೇಟೆ ಜಿ. ಅಡ್ಡಾ ನಿವಾಸಿ, ಆಟೋ ರಿಕ್ಷಾ ಚಾಲಕ ಸಂತೋಷ ಬೋಜಗಾರ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ದೇವಪ್ಪಜ್ಜನ ಪೂಜಾ–ವಿಧಾನಗಳಿಂದಲೇ ನಾವು ಆರ್ಥಿಕವಾಗಿ ಹಾಳಾಗಲು, ಮಾನಸಿಕವಾಗಿ ತೊಂದರೆ ಅನುಭವಿಸಲು ಕಾರಣ ಎಂದು ಹೇಳಿ ಹತ್ಯೆ ಮಾಡಿರುವುದಾಗಿ ತನಿಖೆ ವೇಳೆ ಬಾಯಿಬಿಟ್ಟಿದ್ದಾನೆ.
ಮಂದಿರದ ಹಿಂಬದಿ ಗೇಟ್ ನಲ್ಲಿ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದ. ಖಚಿತ ಮಾಹಿತಿ ಮೇರೆಗೆ ಸೋಮವಾರ ರಾತ್ರಿ ಬಂಧಿಸಲಾಗಿದೆ. ಈತ ಎರಡೂವರೆ ವರ್ಷಗಳಿಂದ ಹತ್ಯೆಗೆ ಸಂಚು ಹಾಕಿದ್ದ. ಆ ನಿಟ್ಟಿನಲ್ಲಿ ದೇವಪ್ಪಜ್ಜನನ್ನು ಹಿಂಬಾಳಿಸುತ್ತಿದ್ದ. ಈ ಹಿಂದೆ 2022ರ ಮಾರ್ಚ್‌ನಲ್ಲಿ ದೇವಪ್ಪಜ್ಜನ ವಿದ್ಯಾನಗರದ ನಿವಾಸದಲ್ಲೂ ಹತ್ಯೆಗೆ ಪ್ರಯತ್ನಿಸಿದ್ದ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


