ತುಮಕೂರು: ಬಹುಕೋಟಿ ಮೌಲ್ಯದ ಬಿಟ್ ಕಾಯಿನ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸೇರಿ ಮೂವರಿಗೆ ತುಮಕೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಶ್ರೀಕಿ, ರಮೇಶ್, ರಬೀನ್ ಖಂಡೇಲ್ ವಾಲಗೆ ಜಾಮೀನು ಮಂಜೂರು ಮಾಡಲಾಗಿದೆ. ಪ್ರಕರಣ ಸಂಬಂಧ ಈ ಮೂವರೂ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
1ನೇ ಹೆಚ್ಚುವರಿ ಹಿರಿಯ ಸಿವಿಲ್ ಹಾಗೂ ಜೆಎಂಎಫ್ಸಿ ಕೋರ್ಟ್ ನ ನ್ಯಾಯಾಧೀಶ ಎನ್.ಸುಬ್ರಹ್ಮಣ್ಯ ಜಾಮೀನು ಮಂಜೂರು ಮಾಡಿದ್ದಾರೆ.
ಬಿಟ್ ಕಾಯಿನ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸಿ 60 ದಿನದೊಳಗೆ ಚಾರ್ಜ್ ಶೀಟ್ ಸಲ್ಲಿಸದ ಹಿನ್ನೆಲೆ ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಜಾಮೀನು ಮಂಜೂರು ಮಾಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA