ದುಬೈನಿಂದ ಸುಮಾರು 1.68 ಕೋಟಿ ಮೌಲ್ಯದ 2 ಕೆ.ಜಿ. 579 ಗ್ರಾಂ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಂ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಕಸ್ಟಂ ಅಧಿಕಾರಿಗಳು ಭರ್ಜರಿ ಕಾರ್ಯಚರಣೆ ಮಾಡಿದ್ದು, 1.68 ಕೋಟಿ ಮೌಲ್ಯದ 2 ಕೆಜಿ 579 ಗ್ರಾಂ ಚಿನ್ನವನ್ನು ಜಪ್ತಿ ಮಾಡಿಕೊಂಡಿದ್ದಾರೆ. ಚಿನ್ನ ಸಾಗಿಸುತ್ತಿದ್ದ ಮುರ್ತಾಜಿಂ ಹಾಗೂ ಶೇಕ್ ಮಹಮ್ಮದ್ ಇಮ್ರಾನ್ ಎನ್ನುವವರನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ದುಬೈ ನಿಂದ ಬೆಂಗಳೂರಿಗೆ EK 564 ವಿಮಾನದಲ್ಲಿ ಈ ಇಬ್ಬರು ಬಂದಿದ್ದರು ಎಂದು ತಿಳಿದುಬಂದಿದೆ. ವಿದೇಶದಿಂದ ಬಟ್ಟೆಗಳಲ್ಲಿ ಮರೆಮಾಚಿ ಚಿನ್ನ ಸಾಗಿಸುತ್ತಿದ್ದಾಗ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಇಬ್ಬರನ್ನು ವಶಕ್ಕೆ ಪಡೆದು ಇದೀಗ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆಯ ಬಳಿಕ ಪೊಲೀಸರಿಗೆ ಒಪ್ಪಿಸಲಿದ್ದಾರೆ ಎಂದು ತಿಳಿದುಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


