ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭೇಟಿಗೆ ಸಮಯ ಕೇಳಿದ್ದಾರೆ. ಈ ವಿಚಾರವನ್ನು ಸ್ವತಃ ಡಿ.ಕೆ. ಶಿವಕುಮಾರ್ ಅವರೇ ಬಹಿರಂಗಪಡಿಸಿದ್ದಾರೆ. ಮೊನ್ನೆ ನಡೆದ ರಾಮನಗರದ ಕರಗ ಮಹೋತ್ಸವದಲ್ಲಿ ದರ್ಶನ್ ವಿಚಾರ ಪ್ರಸ್ತಾಪಿಸಿದ ಡಿಕೆಶಿ, ನನ್ನ ಭೇಟಿಗೆ ದರ್ಶನ್ ಪತ್ನಿ ಸಮಯ ಕೇಳಿದ್ದಾರೆ ಎಂದು ಸ್ಪೋಟಕ ಹೇಳಿಕೆ ನೀಡಿದರು.
ನಾನಿಂದು ದರ್ಶನ್ ಪತ್ನಿಯನ್ನು ಭೇಟಿಯಾಗಿ ಮಾತನಾಡುವೆ. ಏನಾದರೂ ಅನ್ಯಾಯವಾಗಿದ್ದರೆ ಸರಿಪಡಿಸಲು ಪ್ರಯತ್ನಿಸುವೆ. ಆದರೆ, ಪ್ರತಿಯೊಬ್ಬರು ಕೂಡ ಈ ನೆಲದ ಕಾನೂನನ್ನು ಗೌರವಿಸಬೇಕು ಎಂದು ಡಿ.ಕೆ. ಶಿವಕುಮಾರ್ ಅವರು ಹೇಳಿದ್ದರು. ಈ ವೇಳೆ ಅವರ ಭಾಷಣದ ಮಧ್ಯೆ ದರ್ಶನ್ ಅಭಿಮಾನಿಗಳು ಡಿಬಾಸ್ ಎಂದು ಘೋಷಣೆಗಳನ್ನು ಕೂಗಿದ್ದರು.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಥಿತರಾಗಿರುವ ನಟ ದರ್ಶನ್ ಗಾಗಿ ಅವರ ಪತ್ನಿ ವಿಜಯಲಕ್ಷ್ಮಿ ನಿನ್ನೆ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಈ ಬಗ್ಗೆ ಡಿಕೆಶಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಭೇಟಿಯ ಬಳಿಕ ಮಾತನಾಡಿರುವ ಶಿವಕುಮಾರ್, ಮಗನ ವಿಷಯವಾಗಿ ಮಾತನಾಡಲು ಬಂದಿದ್ದರು ಎಂದಿದ್ದಾರೆ.
ಅವರ ಮಗ ವಿನೀಷ್ ನಮ್ಮ ಶಾಲೆಯಲ್ಲಿ ಓದುತ್ತಿದ್ದ, ಆ ನಂತರ ಬೇರೆ ಶಾಲೆಗೆ ಸೇರಿಸಿದ್ದರು. ಈಗ ಮತ್ತೆ ನಮ್ಮ ಶಾಲೆಗೆ ಸೇರಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. ನಾನು ಫ್ರಿನ್ಸಿಫಲ್ ಗೆ ಹೇಳುತ್ತೇನೆ ಎಂದು ಭರವಸೆ ಕೊಟ್ಟಿದ್ದೀನಿ, ಕೇಸ್ ವಿಚಾರವಾಗಿ ಮಾತನಾಡಲು ಅವರು ಬಂದಿರಲಿಲ್ಲ’ ಎಂದಿದ್ದಾರೆ.
ಶಾಲೆಗೆ ಭೇಟಿ ನೀಡುತ್ತಿಲ್ಲ. ಆಡಳಿತ ಜವಾಬ್ದಾರಿಯನ್ನು ಮಕ್ಕಳಿಗೆ ವಹಿಸಿದ್ದೇನೆ. ವಿಜಯಲಕ್ಷ್ಮಿ ಪುತ್ರನ ಭವಿಷ್ಯದ ದೃಷ್ಟಿಯಿಂದ ಬಂದಿದ್ದರು. ಜತೆಗೆ ನಮ್ಮ ಶಾಲೆಯ ಪಕ್ಕದಲ್ಲೇ ಅವರ ನಿವಾಸವಿದೆ. ನಾನು ಆ ಮಗುವಿಗೆ ಒಳ್ಳೆಯದಾಗಲಿ ಎಂದು ಪ್ರಾಂಶುಪಾರನ್ನು ಭೇಟಿ ಮಾಡಲು ಹೇಳಿದ್ದೇನೆ ಎಂದು ಶಿವಕುಮಾರ್ ತಿಳಿಸಿದರು.
ನಾವು ಸಾರ್ವಜನಿಕ ಜೀವನದಲ್ಲಿದ್ದೇವೆ. ನನ್ನ ಭೇಟಿ ಮಾಡಲು ಬಂದವರನ್ನು ಬೇಡ ಎಂದು ಹೇಗೆ ನಿರಾಕರಣೆ ಮಾಡಲಿ? ಅಲ್ಲದೆ, ನಮ್ಮ ಶಾಲೆಯ ಪಕ್ಕದಲ್ಲೇ ಅವರ ಮನೆಯಿದೆ. ನಮ್ಮ ಲೋಕಸಭಾ ಕ್ಷೇತ್ರದಲ್ಲೇ ಅವರ ಮನೆಯಿದೆ. ನನ್ನನ್ನು ಭೇಟಿ ಮಾಡಲು ನೂರಾರು ಜನ ಬಂದಿದ್ದಾರೆ. ಭೇಟಿಗೆ ನಿರಾಕರಿಸಿದರೆ ಶಿವಕುಮಾರ್ ದುರಹಂಕಾರಿ, ಭೇಟಿ ಮಾಡದೆ ತೆರಳಿದರು ಎನ್ನುತ್ತೀರಿ. ಸಾರ್ವಜನಿಕ ಜೀವನದಲ್ಲಿದ್ದಾಗ ಸಹಾಯ ಕೇಳಿಕೊಂಡು ನನ್ನನ್ನು ಭೇಟಿ ಮಾಡುವುದು ನನ್ನ ಕರ್ತವ್ಯ ಎಂದು ಅವರು ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97