ಕೆಲ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆ ಆಗಮಿಸುವ ಭಕ್ತಾಧಿಗಳು ಇದೇ ರೀತಿಯ ವಸ್ತ್ರವನ್ನು ಧರಿಸಬೇಕು ಎಂದು ನಿಯಮ ಜಾರಿಗೆ ತರಲಾಗಿದೆ. ಅದೇ ರೀತಿ ಇದೀಗ ಶಾರದಾ ಪೀಠ ಶೃಂಗೇರಿಯಲ್ಲಿ ಶಾರದ ದೇವಿಯ ದರ್ಶನಕ್ಕೆ ಬರುವ ಭಕ್ತಾದಿಗಳು ಭಾರತೀಯ ಸಂಪ್ರದಾಯಿಕ ಉಡುಗೆಯಲ್ಲಿ ಬರಲು ಶಾರದಾ ಪೀಠ ಶೃಂಗೇರಿಯ ಆಡಳಿತ ಅಧಿಕಾರಿಗಳು ತಿಳಿಸಿದ್ದು, ಮನವಿ ಮಾಡಿದ್ದಾರೆ.
ಈ ಮೂಲಕ ಶೃಂಗೇರಿಯ ಭಕ್ತಾಧಿಗಳು ಇನ್ನು ಮುಂದೆ ದೇವರ ದರ್ಶನಕ್ಕೆ ಹೋಗುವಾಗ ಈ ಕೆಳಕಂಡ ಭಾರತೀಯ ಸಂಪ್ರದಾಯದಂತೆ ವಸ್ತ್ರವನ್ನು ಧರಿಸಿಯೇ ಹೊಗಬೇಕು.ಇದೀಗ ಶೃಂಗೇರಿಯ ಸುಪ್ರಸಿದ್ಧ ಶಾರದಾ ದೇವಿ ದರ್ಶನಕ್ಕೆ ಬರುವ ಭಕ್ತಾದಿಗಳು ಇದೇ ರೀತಿಯ ವಸ್ತ್ರ ಸಂಹಿತೆಯಲ್ಲಿ ಬರಬೇಕು. ಈ ಕುರಿತು ಶಾರದಾ ಪೀಠ ಶೃಂಗೇರಿಯ ಆಡಳಿತ ಅಧಿಕಾರಿಗಳು ಮಾಹಿತಿ ನೀಡದ್ದು, ಆಗಷ್ಟ್ 15ರಿಂದ ದೇವಾಲಯಕ್ಕೆ ಬರುವ ಭಕ್ತಾದಿಗಳು ಇದೇ ರೀತಿಯಲ್ಲಿ ವಸ್ತ್ರಗಳನ್ನು ಧರಿಸಿಕೊಂಡು ಬರಬೇಕು ಎಂದು ತಿಳಿಸಿದೆ.
ಪುರುಷರು ಧೋತಿ ಮತ್ತು ಶಲ್ಯ ಹಾಗೂ ಉತ್ತರೀಯ ಧರಿಸಿಕೊಂಡು ಬರಬೇಕು. ಅದೇ ರೀತಿ ಮಹಿಳೆಯರು ಸೀರೆ ರವಿಕೆ, ಸಲ್ವಾರ್ ಜೊತೆಗೆ ದುಪಟ್ಟ ಅಥವಾ ಲಂಗ ದಾವಣಿ ಗಳಂತ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿ ಬರುವಂತೆ ದೇವಸ್ಥಾನದ ಅಡಳಿತಮಂಡಳಿ ಸೂಚನೆಯಲ್ಲಿ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA