ಕ್ಷುಲಕ ಕಾರಣಕ್ಕೆ ಪ್ರೇಮಿಗಳ ನಡುವೆ ಗಲಾಟೆ ನಡೆದಿದ್ದು, ಇದರಿಂದ ನೊಂದು ಪ್ರಿಯತಮೆ ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ಪ್ರಿಯತಮನೂ ನೇಣಿಗೆ ಶರಣಾದ ಘಟನೆ ಮೈಸೂರಿನ ದಟ್ಟಗಳ್ಳಿ ಹಾಗೂ ಜ್ಯೋತಿ ನಗರದಲ್ಲಿ ನಡೆದಿದೆ.
ಮೋನಿಕಾ(20) ಹಾಗೂ ಮನು(22) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮಂಡಕಳ್ಳಿ ಗ್ರಾಮದ ನಿವಾಸಿ ಮೋನಿಕಾ ಹಾಗೂ ಮೈಸೂರಿನ ಜ್ಯೋತಿನಗರದ ಮನು ಕಳೆದ 2 ವರ್ಷಗಳಿಂದ ಪ್ರೀತಿಸುತ್ತಿದ್ದರು. ಮನೆಯಲ್ಲಿ ಇಬ್ಬರಿಗೂ ಮದುವೆ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದರು. ಇತ್ತೀಚೆಗೆ ಪ್ರೇಮಿಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಭಿನ್ನಾಭಿಪ್ರಾಯ ಸೃಷ್ಟಿಯಾಗಿತ್ತು. ಇಬ್ಬರ ನಡುವೆ ಸಣ್ಣ ಗಲಾಟೆಯಾಗಿತ್ತು.
ಇದರಿಂದ ಬೇಸತ್ತ ಮೋನಿಕಾ ದಟ್ಟಗಳ್ಳಿಯ ಕೆಲಸ ಮಾಡುತ್ತಿದ್ದ ಮನೆಯೊಂದರಲ್ಲಿ ನೇಣಿಗೆ ಶರಣಾಗಿದ್ದಾಳೆ. ವಿಷಯ ತಿಳಿದ ಮನು ಸ್ಥಳಕ್ಕೆ ಧಾವಿಸಿ ಮೋನಿಕಾಳನ್ನ ಆಸ್ಪತ್ರೆಗೆ ಕರೆತಂದಿದ್ದಾನೆ. ಆದ್ರೆ ಮೋನಿಕಾ ಮೃತಪಟ್ಟಿದ್ದಳು.
ಮೋನಿಕಾ ಸಾವಿಗೆ ಮನನೊಂದ ಮನು ತಾನೂ ಸಹ ಜ್ಯೋತಿನಗರದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA