ಮಾಜಿ ಪ್ರಧಾನಿಯೂ ಆಗಿರುವ ರಾಜ್ಯಸಭಾ ಸದಸ್ಯ ಹೆಚ್.ಡಿ ದೇವೇಗೌಡ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಂದು ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿ ಮಾಡಿದ್ದಾರೆ.
ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿಯವರ ನಿವಾಸದಲ್ಲಿ ಭೇಟಿಯಾಗಿ, ಹಲವು ಮಹತ್ವದ ವಿಚಾರಗಳನ್ನ ಚರ್ಚಿಸಿದ್ದಾರೆ. ಈ ಮಾಹಿತಿಯನ್ನು ಸ್ವತಃ ಮೋದಿ ಅವರೇ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಜೀ ಅವರನ್ನು ಭೇಟಿಯಾಗಿರುವುದು ಗೌರವದ ಸಂಗತಿ. ವಿವಿಧ ವಿಚಾರಗಳ ಬಗ್ಗೆ ಅವರಿಗಿರುವ ಬುದ್ಧಿವಂತಿಕೆ ಹಾಗೂ ಅವರ ಆಳವಾದ ದೃಷ್ಟಿಕೋನ ಅತ್ಯಂತ ಮೌಲ್ಯಯುತವಾಗಿದೆ ಎಂದು ಬರೆದುಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA