ಕಾಲೇಜಿನಲ್ಲಿ ನಡೆದ ಕ್ರೂರವಾದ ರ‍್ಯಾಗಿಂಗ್ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಅದರ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಘಟನೆ ಆಂಧ್ರಪ್ರದೇಶದ ಪಲ್ನಾಡಿನ ಎಸ್ ಎಸ್ ಎನ್ ಕಾಲೇಜಿನಲ್ಲಿ ನಡೆದಿದೆ.
ಎನ್ ಸಿಸಿ ತರಬೇತಿ ನೆಪದಲ್ಲಿ ಸೀನಿಯರ್ ವಿದ್ಯಾರ್ಥಿಗಳ ಗುಂಪು ಮಧ್ಯರಾತ್ರಿಯಲ್ಲಿ ಜೂನಿಯರ್ ವಿದ್ಯಾರ್ಥಿಗಳನ್ನು ತಮ್ಮ ಕೋಣೆಗೆ ಕರೆದು ಕೋಲುಗಳಿಂದ ಹೊಡೆದಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಗುರುವಾರ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ, ಜೂನಿಯರ್ ವಿದ್ಯಾರ್ಥಿಗಳನ್ನು ಹೊಡೆಯುವ ಮುನ್ನ ಅವರನ್ನು ಮಲಗಿಸಿ ನಂತರ ಕೋಲುಗಳಿಂದ ಎಲ್ಲರೂ ಹೊಡೆಯುತ್ತಾರೆ. ಸೀನಿಯರ್ ವಿದ್ಯಾರ್ಥಿಗಳು ತಾವು ಮಾಡಿದ ಕಾರ್ಯಕ್ಕೆ ನಗುತ್ತಾ ತಮಾಷೆ ಮಾಡಿಕೊಳ್ಳುತ್ತಿದ್ದರೆ ಪೆಟ್ಟು ತಿಂದ ಜೂನಿಯರ್ ವಿದ್ಯಾರ್ಥಿಗಳು ಅಳುತ್ತಿದ್ದಾರೆ. ಜೊತೆಗೆ ಇದನ್ನು ವಿಡಿಯೋ ಮಾಡಿ ಸಂತೋಷ ಪಟ್ಟಿದ್ದಾರೆ.
ಈ ವಿಡಿಯೊವನ್ನು ವೈಎಸ್ ಆರ್ ಸಿಪಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಬುಧವಾರ ವಿದ್ಯಾರ್ಥಿಯೊಬ್ಬನನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿವೆ. ಪೊಲೀಸರ ಪ್ರಕಾರ, ಫೆಬ್ರವರಿ 2ರಂದು ಆರು ಅಂತಿಮ ವರ್ಷದ ವಿದ್ಯಾರ್ಥಿಗಳು ಎನ್‍ಸಿಸಿ ತರಬೇತಿಯ ಸೋಗಿನಲ್ಲಿ ಹತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳನ್ನು ರ‍್ಯಾಗಿಂಗ್ ಗೆ ಒಳಪಡಿಸಿದ್ದರು, ಇದು ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸ್ ತಂಡವು ಕಾಲೇಜಿಗೆ ಭೇಟಿ ನೀಡಿ ವಿಚಾರಣೆ ನಡೆಸಿದೆ. ವಿದ್ಯಾರ್ಥಿಗಳ ಹೇಳಿಕೆಗಳು ಮತ್ತು ವಿಡಿಯೊ ಪುರಾವೆಗಳ ಆಧಾರದ ಮೇಲೆ, ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಮತ್ತು ಒಬ್ಬನನ್ನು ಬಂಧಿಸಿದ್ದಾರೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA