ಬೆಂಗಳೂರಿನ ಕೋರಮಂಗಲ ಪಿಜಿಯೊಂದರಲ್ಲಿ ನಡೆದ ಕೃತಿ ಕುಮಾರಿ ಎಂಬ ಯುವತಿಯ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಬೆಂಗಳೂರಲ್ಲಿ ಯಶಸ್ವಿಯಾಗಿದ್ದಾರೆ. ಕೃತ್ಯವೆಸಗಿದ ಆರೋಪಿ ಅಭಿಷೇಕ್ ನನ್ನು ಮಧ್ಯಪ್ರದೇಶದಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತರಲಾಗಿದೆ.
ಮಧ್ಯಪ್ರದೇಶಕ್ಕೆ ತೆರಳಿದ್ದ ಬೆಂಗಳೂರು ಪೊಲೀಸರು, ಅಲ್ಲಿನ ಭೋಪಾಲ್ ನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಸ್ಥಳೀಯ ಕೋರ್ಟ್‌ಗೆ ಹಾಜರುಪಡಿಸಿ, ಟ್ರಾನ್ಸಿಟ್ ವಾರೆಂಟ್ ಮೇಲೆ ಬೆಂಗಳೂರಿಗೆ ಕರೆ ತಂದಿದ್ದಾರೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.
ರಾಜಧಾನಿಯ ಕೋರಮಂಗಲದ ಪಿಜಿಯಲ್ಲಿ ಕೃತಿ ಕುಮಾರಿ ಎಂಬಾಕೆಯನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಈ ಘಟನೆಯ ತನಿಖೆ ನಡೆಸುವ ಅಧಿಕಾರಿಗಳಿಗೆ ಬೆಚ್ಚಿ ಬೀಳಿಸುವ ಇನ್ನಷ್ಟು ವಿವರಗಳು ಹೊರಬಿದ್ದಿವೆ. ಕೊಲೆಯಾಗಿ ಹೋದವಳು ಈತನ ಪ್ರೇಯಸಿಯ ಗೆಳತಿಯಾಗಿದ್ದು, ಈ ದುಷ್ಟನ ಕೈಯಿಂದ ಗೆಳತಿಯನ್ನು ಬಿಡಿಸುವ ಯತ್ನದಲ್ಲಿ ತಾನೇ ಕೊಲೆಗಿದ್ದಾಳೆ ಎಂದು ತಿಳಿದುಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


