ಮುಂಬೈನಲ್ಲಿ 20ರ ಹರೆಯದ ಯುವತಿಯೊಬ್ಬಳನ್ನು ಆಕೆಯ ಪ್ರಿಯಕರನೇ ಬರ್ಬರವಾಗಿ ಇರಿದು ಕೊಂದು, ಆಕೆಯ ಶವವನ್ನು ರೈಲ್ವೆ ನಿಲ್ದಾಣದ ಬಳಿಯ ಪೊದೆಯಲ್ಲಿ ಎಸೆದಿರುವ ಘಟನೆ ನಡೆದಿದೆ.
ಕೊಲೆಯಾದ ಯುವತಿಯನ್ನು ಯಶಶ್ರೀ ಶಿಂಧೆ ಎಂದು ಗುರುತಿಸಲಾಗಿದೆ ಅಂದಹಾಗೆ ಯಶಶ್ರೀಯು ನಾಪತ್ತೆಯಾಗಿದ್ದಾಳೆ ಎಂದು ದೂರು ದಾಖಲಾಗಿತ್ತು. ಈಕೆ ಊರನ್ ನಿವಾಸಿಯಾಗಿದ್ದು, ಸುಮಾರು 25 ಕಿ.ಮೀ ದೂರದ ಬೇಲಾಪುರದಲ್ಲಿ ಕೆಲಸ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.
ಘಟನೆಯ ಕುರಿತು ಉಪ ಪೊಲೀಸ್ ಆಯುಕ್ತ (ನವಿ ಮುಂಬೈ) ವಿವೇಕ್ ಪನ್ಸಾರೆ ಪ್ರತಿಕ್ರಿಯಿಸಿ, ಉರಾನ್ ರೈಲು ನಿಲ್ದಾಣದ ಬಳಿಯ ಪೊದೆಯಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದೆ ಎಂದು ಬೆಳಗಿನ ಜಾವ 2 ಗಂಟೆಯ ಸುಮಾರಿಗೆ ಪೊಲೀಸರಿಗೆ ಕರೆ ಬಂದಿತ್ತು. ಆಕೆಯ ಮೃತದೇಹ ಅನೇಕ ಗಾಯದ ಗುರುತುಗಳು ಮತ್ತು ಇರಿತದ ಗಾಯಗಳನ್ನು ಒಳಗೊಂಡಿದೆ. ಇದು ಆಕೆಯನ್ನು ಅತ್ಯಂತ ಬರ್ಬರವಾಗಿ ಹತ್ಯೆಗೈಯಲಾಗಿದೆ ಎಂದು ಸೂಚಿಸುತ್ತದೆ ಅಲ್ಲದೆ ಪ್ರೀತಿ ವಿಚಾರವಾಗಿ ಕೊಲೆ ಮಾಡಲಾಗಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ.
ಘಟನೆಯ ಬಳಿಕ ಪ್ರಿಯಕರ ಕೂಡ ನಾಪತ್ತೆಯಾಗಿದ್ದಾನೆ. ಈ ಕುರಿತು ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ. ಸದ್ಯದಲ್ಲೇ ಆರೋಪಿ ಪತ್ತೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA