ಬಿಜೆಪಿ ಜೆಡಿಎಸ್ ಜಂಟಿ ಸುದ್ದಿಗೋಷ್ಠಿಯಲ್ಲೆ ಕೇಂದ್ರ ಸಚಿವರಾದಂತಹ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮೂಗಿನಿಂದ ರಕ್ತಸ್ರಾವ ಆಯಿತು. ತಕ್ಷಣ ಅವರನ್ನು ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಹೆಚ್.ಡಿ.ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ ವಿಚಾರವಾಗಿ ಮಗ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ. ಕೆಲಸದ ಒತ್ತಡದಲ್ಲಿ ವಿಶ್ರಾಂತಿ ಪಡೆದುಕೊಳ್ಳಲು ಆಗಿಲ್ಲ. ಆತಂಕಪಡುವ ವಾತಾವರಣ ಇಲ್ಲ. ಕುಮಾರಣ್ಣ ಅವರು ಆರೋಗ್ಯವಾಗಿದ್ದಾರೆ.ತಂದೆ–ತಾಯಿ ಆಶೀರ್ವಾದ ಕುಮಾರಣ್ಣ ಮೇಲೆ ಇದೆ. ಅವರಿಗೆ ಏನೂ ಆಗಿಲ್ಲ, ಆರೋಗ್ಯವಾಗಿದ್ದಾರೆ ಎಂದು ಹೇಳಿದ್ದಾರೆ.
ಡಾಕ್ಟರ್ ಕೂಡ ಹೇಳಿದ್ದಾರೆ ಆತಂಕ ಬೇಡ ಅಂತ. ಯಾವ ರೀತಿ ಚಿಕಿತ್ಸೆ ಕೊಡಬೇಕು ಅಂತ ಪರೀಕ್ಷೆ ಮಾಡುತ್ತಿದ್ದಾರೆ. ಸಣ್ಣ ಪುಟ್ಟ ಏರುಪೇರು ಸಾಮಾನ್ಯ. ಆರೋಗ್ಯ ಲೆಕ್ಕಿಸದೆ ಸಂಸತ್ನಲ್ಲಿ ಮಾತಾಡಿದ್ದಾರೆ. ರಾತ್ರಿ ಪುಸ್ತಕಗಳನ್ನ ಓದುತ್ತಾರೆ. ರಾಜ್ಯದ ಜನರಿಗೆ ಏನಾದರೂ ಕೊಡಬೇಕು ಅಂತ ಕೆಲಸ ಮಾಡುತ್ತಿದ್ದಾರೆ. ಈಶ್ವರನ ನಂಬಿಕೊಂಡಿದ್ದೇವೆ, ಜನ, ರೈತರ ಆಶೀರ್ವಾದ ಇದೆ. ಇಂದು ರಾತ್ರಿಯೇ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದಿದ್ದಾರೆ.
ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇಎನ್ಟಿ ವಿಭಾಗದ ಮುಖ್ಯಸ್ಥ ಡಾ.ಯತೀಶ್ ವೈದ್ಯರ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ರಕ್ತ ಸೋರಿಕೆ ನಿಂತಿದ್ದು, ಆತಂಕಪಡುವ ಅಗತ್ಯ ಇಲ್ಲ. ಕುಮಾರಸ್ವಾಮಿ ಆರೋಗ್ಯಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಅಪೋಲೊ ವೈದ್ಯರು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


