ಹೊಸ ಸಿನಿಮಾಗಳನ್ನು ಕೆಲವೇ ದಿನಗಳಲ್ಲಿ ವೆಬ್ ಸೈಟ್ ಗೆ ಅಪ್ ಲೋಡ್ ಮಾಡಿ ಚಿತ್ರ ನಿರ್ಮಾಪಕರಿಗೆ ನಷ್ಟ ಉಂಟು ಮಾಡುತ್ತಿದ್ದ ತಮಿಳ್ ರಾಕರ್ಸ್ ವೆಬ್ ಸೈಟ್ ಅಡ್ಮಿನ್ ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಸ್ಟೀಫನ್ ರಾಜ್ ಬಂಧಿತ ಆರೋಪಿಯಾಗಿದ್ದಾನೆ. ಈತ ಕೇರಳದ ತಿರುವನಂತಪುರಂನಲ್ಲಿರುವ ಏರಿಯಾಸ್ ಥಿಯೇಟರ್ ನಲ್ಲಿ ನಟ ಧನುಷ್ ಅಭಿನಯದ ರಾಯನ್ ಚಿತ್ರದ ರೆಕಾರ್ಡಿಂಗ್ ಮಾಡುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ.
ಸ್ಟೀಫನ್ ಒಂದು ವರ್ಷಗಳಿಂದಲೂ ಹೊಸ ಸಿನಿಮಾ ರಿಲೀಸ್ ಆಗುತ್ತಿದ್ದಂತೆಯೇ ಮೊದಲಿಗೆ ಬರುತ್ತಿದ್ದನಂತೆ. ಸೀಟಿನಲ್ಲಿ ಚಿಕ್ಕ ಕ್ಯಾಮೆರಾ ಅಳವಡಿಸಿ ಹೊಸ ಚಿತ್ರಗಳ ವಿಡಿಯೋ ತೆಗೆಯುತ್ತಿದ್ದ ಎಂದು ಪೊಲೀಸರ ವಿಚಾರಣೆ ವೇಳೆ ಹೇಳಿದ್ದಾನೆ.
ಒಂದು ಚಿತ್ರವನ್ನು ಈತ ವೆಬ್ ಸೈಟ್ ಗೆ ಅಪ್ ಲೋಡ್ ಮಾಡಿದ್ರೆ 5 ಸಾವಿರ ರೂಪಾಯಿ ಕಮಿಷನ್ ಸಿಗುತ್ತಿತ್ತು ಎಂದು ಆತ ತಿಳಿಸಿರುವುದಾಗಿ ತಿಳಿದು ಬಂದಿದೆ.
ತಮಿಳ್ ರಾಕರ್ಸ್ ಅಂದ್ರೆ ಪೈರಸಿ ಮಾಡೋದ್ರಲ್ಲಿ ಪಂಟರ್ ಅಂತಲೇ ಕರೆಯಲ್ಪಡುತ್ತಾರೆ. ಈಗಾಗಲೇ ಇವರ ವಿರುದ್ಧ ಹಲವಾರು ಬಾರಿ ಸೈಬರ್ ಪೊಲೀಸರು ಕ್ರಮಕೈಗೊಂಡಿದ್ದರು. ಆದರೆ ಎಷ್ಟು ಬಾರಿ ಇವರ ವೆಬ್ ಸೈಟ್ ಬ್ಲಾಕ್ ಆದ್ರೂ ಮತ್ತೆ ಹೊಸ ಐಡಿ, ಪಾಸ್ ವರ್ಡ್ ಕ್ರಿಯೇಟ್ ಮಾಡಿ ಸಿನಿಮಾ ಅಪ್ ಲೋಡ್ ಮಾಡಲು ಆರಂಭಿಸುತ್ತಾರೆ. ಸದ್ಯ ಇದೀಗ ತಮಿಳ್ ರಾಕರ್ಸ್ ಅಡ್ಮೀನ್ ನ ಬಂಧನ ಚಿತ್ರ ನಿರ್ಮಾಪಕರಿಗೆ ನೆಮ್ಮದಿ ತರುವಂತಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA