nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಷ್ಟ್ರನಾಯಕರ ಜಯಂತಿ ಆಚರಣಾ ಪೂರ್ವಭಾವಿ ಸಭೆಗೆ ಅಧಿಕಾರಿಗಳು ಗೈರು: ಸಭೆಯಿಂದ ಹೊರ ನಡೆದ ಮುಖಂಡರು

    March 16, 2026

    ಟೀಕೆ ಟಿಪ್ಪಣಿಗಳಿಗೆ ಅಭಿವೃದ್ದಿಯೇ ಉತ್ತರ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    March 16, 2026

    ಶಾಸಕರ ಪ್ರಶ್ನೆಗಳಿಗೆ ಉತ್ತರವಿಲ್ಲ: ‘ಹೀಗಾದರೆ ಸದನ ನಡೆಸುವುದು ಹೇಗೆ?’: ಸದನದಿಂದ ಹೊರನಡೆದ ಸ್ಪೀಕರ್ ಯು.ಟಿ. ಖಾದರ್

    March 16, 2026
    Facebook Twitter Instagram
    ಟ್ರೆಂಡಿಂಗ್
    • ರಾಷ್ಟ್ರನಾಯಕರ ಜಯಂತಿ ಆಚರಣಾ ಪೂರ್ವಭಾವಿ ಸಭೆಗೆ ಅಧಿಕಾರಿಗಳು ಗೈರು: ಸಭೆಯಿಂದ ಹೊರ ನಡೆದ ಮುಖಂಡರು
    • ಟೀಕೆ ಟಿಪ್ಪಣಿಗಳಿಗೆ ಅಭಿವೃದ್ದಿಯೇ ಉತ್ತರ: ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಶಾಸಕರ ಪ್ರಶ್ನೆಗಳಿಗೆ ಉತ್ತರವಿಲ್ಲ: ‘ಹೀಗಾದರೆ ಸದನ ನಡೆಸುವುದು ಹೇಗೆ?’: ಸದನದಿಂದ ಹೊರನಡೆದ ಸ್ಪೀಕರ್ ಯು.ಟಿ. ಖಾದರ್
    • ಮಾರುಕಟ್ಟೆ ದರಕ್ಕಿಂತ ಮೂರು ಪಟ್ಟು ಹೆಚ್ಚು ಹಣ ನೀಡಿ ಜಮೀನು ಖರೀದಿ: ಸ್ಮಶಾನ ಭೂಮಿ ಕೊರತೆ ನೀಗಿಸಲು ಸರ್ಕಾರ ಪ್ಲಾನ್
    • ಸರ್ಕಾರಿ ಶಾಲೆಗಳ ವಿಲೀನ: 2022ರಿಂದ ಈವರೆಗೆ 31 ಹೊಸ ಕೆಪಿಎಸ್ ಶಾಲೆಗಳ ಆರಂಭ: ಸಚಿವ ಮಧು ಬಂಗಾರಪ್ಪ
    • ಮಾ.25ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ: ಒಳಮೀಸಲಾತಿ ವರದಿ ವಿರೋಧಿಸಿ ಛಲವಾದಿ ಮಹಾಸಭಾ ಕರೆ
    • ಕೊರಟಗೆರೆ ಪಟ್ಟಣ ಪಂಚಾಯಿತಿ ಈಗ ಪುರಸಭೆ: 15ರಿಂದ 23ಕ್ಕೆ ಏರಿಕೆಯಾದ ವಾರ್ಡ್‌ಗಳ ಸಂಖ್ಯೆ
    • ತುಮಕೂರಿನಲ್ಲಿ ಟೆನಿಸ್, ಶೂಟಿಂಗ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ: ಕಾರ್ಯಕ್ರಮ ಮುಂದೂಡಿ ಅಪಘಾತ ಸ್ಥಳಕ್ಕೆ ತೆರಳಿದ ಗೃಹಸಚಿವರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೃಷಿ, ಅಬಕಾರಿ ಇಲಾಖೆ ವಿರುದ್ಧ ಹರಿಹಾಯ್ದ ಶಾಸಕ ಎಂ.ವಿ.ವೀರಭದ್ರಯ್ಯ
    ಮಧುಗಿರಿ January 4, 2022

    ಕೃಷಿ, ಅಬಕಾರಿ ಇಲಾಖೆ ವಿರುದ್ಧ ಹರಿಹಾಯ್ದ ಶಾಸಕ ಎಂ.ವಿ.ವೀರಭದ್ರಯ್ಯ

    By adminJanuary 4, 2022No Comments2 Mins Read

    ಮಧುಗಿರಿ:  ತಾಲೂಕಿನಲ್ಲಿ ಕೃಷಿ ಇಲಾಖೆಯ ಬಗ್ಗೆ ಹಲವಾರು  ಆರೋಪಗಳಿದ್ದು, ರೈತರ ಪರ ಕೆಲಸ ನಿರ್ವಹಿಸಬೇಕಾದ ಇಲಾಖೆಯೇ ರೈತರಿಗೆ ತಲೆ ನೋವಾಗಿದೆ. ನಿಮಗೆ ನಿಭಾಯಿಸಲು ಸಾಧ್ಯ ವಾಗದ್ದಿದ್ದರೆ ವರ್ಗಾವಣೆ ಪಡೆದುಕೊಂಡು ಹೋಗಬಹುದು ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಹನುಮಂತರಾಯಪ್ಪ ಅವರ ಬಗ್ಗೆ ಶಾಸಕ ಎಂ.ವಿ.ವೀರಭದ್ರಯ್ಯ ಕೆ.ಡಿ.ಪಿ.ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

    ಪಟ್ಟಣದಲ್ಲಿರುವ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಶಾಸಕ ಎಂ.ವಿ.ವೀರಭದ್ರಯ್ಯ ನವರ ಅಧ್ಯಕ್ಷತೆಯಲ್ಲಿ ನಡೆದ ಕೆ.ಡಿ.ಪಿ. ಸಭೆಯಲ್ಲಿ ಶಾಸಕರು ಕೃಷಿ ಇಲಾಖೆಯ ಕಾರ್ಯ ವೈಖರಿ ಬಗ್ಗೆ ತರಾಟೆಗೆತ್ತಿಕೊಂಡರು. ರಾಜಕೀಯ ಮಾಡುವುದನ್ನು ಬಿಟ್ಟು ರೈತರ ಪರ ಕೆಲಸ ನಿರ್ವಹಿಸಿ, ಇಲಾಖೆಯ ಸೌಲಭ್ಯಗಳನ್ನು ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ನಿರ್ವಹಿಸಿ ಇಲ್ಲದಿದ್ದರೆ ವರ್ಗಾವಣೆ ಪಡೆದು ಹೊರಟು ಹೋಗಿ ಬೇರೆಯವರು ಬಂದು ನಿಮ್ಮ ಇಲಾಖೆಯ ಕೆಲಸ ನಿರ್ವಹಿಸುತ್ತಾರೆ ಎಂದರು.


    Provided by
    Provided by

    ತಾಲೂಕಿನ ಪ್ರತಿ ಗ್ರಾಮಗಳ ಪೆಟ್ಟಿಗೆ ಅಂಗಡಿಗಳಲ್ಲೂ ಕೂಡ ಮದ್ಯ ದೊರೆಯುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿದ್ದು, ಅಬಕಾರಿ ಇಲಾಖೆ ಏನು ಕ್ರಮ ತೆಗೆದುಕೊಂಡಿದೆ ಎಂದು ಅಬಕಾರಿ ನಿರೀಕ್ಷಕ ರಾಮಮೂರ್ತಿ ಅವರನ್ನು ಪ್ರಶ್ನಿಸಿದ ಶಾಸಕರು ಮುಂದಿನ ದಿನಗಳಲ್ಲಿ ಇವುಗಳಿಗೆ ಕಡಿವಾಣ ಹಾಕಿ ಎಂದರು.

    ಎತ್ತಿನ ಹೊಳೆ ಯೋಜನೆ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿದ್ದು, ತಿಂಗಳಿಗೆ ಕೇವಲ 1 ಕಿ.ಮೀ.ನಷ್ಟು ದೂರ ಮಾತ್ರ ಕಾಮಗಾರಿ ನಡೆಯುತ್ತಿದ್ದು, ಹೀಗಾದರೆ ಕಾಮಗಾರಿ ಮುಗಿದು ತಾಲೂಕಿನ ಕೆರೆಗಳಿಗೆ ನೀರು ಹರಿಸುವುದು ಯಾವಾಗ ಎಂದು ಇಲಾಖೆಯ ಅಧಿಕಾರಿಗಳನ್ನು ಶಾಸಕರು ಪ್ರಶ್ನಿಸಿದಾಗ,  ಅನುದಾನದ ಕೊರತೆಯಿಂದಾಗಿ ಕಾಮಗಾರಿ ವಿಳಂಬವಾಗುತ್ತಿದ್ದು ಈಗಾಗಲೇ ಕೆಲಸ ನಿರ್ವಹಿಸಿರುವ ಕಾಮಗಾರಿಯ ಬಾಬ್ತು ಇನ್ನು 150 ಕೋಟಿ ರೂ. ಸರಕಾರ ಬಾಕಿ ಪಾವತಿಸಬೇಕಿದೆ ಎಂದು ಅಧಿಕಾರಿಗಳು ಶಾಸಕರಿಗೆ ಮಾಹಿತಿ ನೀಡಿದರು.

    ಕೋವಿಡ್ ನಂತರ ಹಾಸ್ಟಲ್ ಗಳ ಪರಿಸ್ಥಿತಿ ಹೇಗಿದೆ? ಎಷ್ಟು ಜನ ವಿಧ್ಯಾರ್ಥಿಗಳು ತಾಲೂಕಿನಲ್ಲಿ ಹಾಸ್ಟಲ್ ಗಳ ಪ್ರವೇಶಕ್ಕೆ ನೊಂದಣಿ ಮಾಡಿಸಿಕೊಂಡಿದ್ದಾರೆ ಎಂದು ಮಾಹಿತಿ ಕೇಳಿದಾಗ, ಕೋವಿಡ್ ಆರಂಭಕ್ಕೂ ಮುಂಚೆ 1,593 ವಿಧ್ಯಾರ್ಥಿಗಳಿದ್ದು ಈಗ 1,213 ವಿದ್ಯಾರ್ಥಿಗಳು ಪ್ರವೇಶ ಪಡೆದು ಕೊಂಡಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಚಂದ್ರಶೇಖರ್ ಮಾಹಿತಿ ನೀಡಿದಾಗ, ಹಾಸ್ಟೆಲ್ ಗಳಲ್ಲಿ ಊಟದ ಸೌಲಭ್ಯಗಳನ್ನು ನಿರ್ವಹಿಸಿ ಮೆನ್ಯೂ ಪ್ರಕಾರವೇ ಊಟವನ್ನು ನೀಡಬೇಕು ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆಯು ಜಾಗೃತಿ ವಹಿಸಿ ಮಕ್ಕಳ ವಿದ್ಯಾರ್ಥಿ ವೇತನಕ್ಕೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.

    ಈಗಿರುವ ಸರಕಾರಿ ನ್ಯಾಯಬೆಲೆ ಅಂಗಡಿಗಳನ್ನು ಹೊಸದಾಗಿ ಜಾರಿಯಾಗಿರುವ ಸರಕಾರಿ ಅದೇಶದಂತೆ ತಾಲೂಕಿನಲ್ಲಿ ಸುಮಾರು 40 ಹೊಸ ಅಂಗಡಿಗಳನ್ನು ತೆರಿಯಬಹುದು ನಿರುದ್ಯೋಗಿ ವಿದ್ಯಾವಂತರಿಗೆ ಅನುಕೂಲವಾಗಲಿದ್ದು, ಗ್ರಾಮಗಳಲ್ಲೇ ನ್ಯಾಯ ಬೆಲೆ ಅಂಗಡಿ ತೆರೆದರೆ ಪಡಿತರದಾರರಿಗೆ ಅನುಕೂಲವಾಗಲಿದೆ ಎಂದು ಶಾಸಕ ಎಂ.ವಿ.ವೀರಭದ್ರಯ ತಿಳಿಸಿದರು.

    ಸಭೆಯಲ್ಲಿ ತಾ.ಪಂ.ಇ.ಒ. ಲಕ್ಷ್ಮಣ್ ಮಾತನಾಡಿ, ಸರಕಾರದ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಅತಿಜರೂರಾಗಿ ಮಾಡಬೇಕು ಹಾಗೂ ತಾಲೂಕಿನಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಮಾರ್ಚ್ ಒಳಗೆ ಸಂಪೂರ್ಣವಾಗಿ ಪೂರ್ಣಗೊಳಿಸಲು ಕ್ರಮ ತೆಗೆದುಕೊಳ್ಳಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

    ಲೋಕೋಪಯೋಗಿ ಇಲಾಖೆಯ ಎಇಇ ರಾಜಗೋಪಾಲ್,  ಜಿ.ಪಂ.ಎಇಇ ಸುರೇಶ್ ರೆಡ್ಡಿ, ಅರಣ್ಯ ಇಲಾಖೆ ಅಧಿಕಾರಿ ರವಿ, ಸಿ.ಡಿ.ಪಿ.ಒ.ಎಸ್.ಅನಿತಾ, ಬಿ.ಇ.ಒ.ನಂಜುಂಡಯ್ಯ, ಆರೋಗ್ಯಾಧಿಕಾರಿ ಡಾ.ರಮೇಶ್ ಬಾಬು, ಆಹಾರ ಇಲಾಖೆಯ ಶಿರಸ್ಥೆ ದಾರ್ ಗಣೇಶ್, ತೊಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ವಿಶ್ವನಾಥಗೌಡ, ಪಶು ಇಲಾಖೆಯ ಸಹಾಯಕ ನಿರ್ದೇಶಕ ಡಾ.ಗಿರೀಶ್ ಬಾಬು ರೆಡ್ಡಿ, ಗ್ರಾಮೀಣ ಕುಡಿಯುವ ನೀರು ಸರಬರಾಜು ರಾಮ್ ದಾಸ್, ಪುರಸಭೆ ಮುಖ್ಯಾಧಿಕಾರಿ ನಜ್ಮಾ, ಸಾಮಾಜಿಕ ಆರಣ್ಯ ಇಲಾಖೆಯ ತಾರಕೇಶ್ವರಿ, ಬೆಸ ಕಾಂ ಇಲಾಖೆಯ ಎಇಇ ಶ್ರೀನಿವಾಸ್, ಇದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

    March 12, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    March 5, 2026

    Leave A Reply Cancel Reply

    Our Picks

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ರಾಷ್ಟ್ರನಾಯಕರ ಜಯಂತಿ ಆಚರಣಾ ಪೂರ್ವಭಾವಿ ಸಭೆಗೆ ಅಧಿಕಾರಿಗಳು ಗೈರು: ಸಭೆಯಿಂದ ಹೊರ ನಡೆದ ಮುಖಂಡರು

    March 16, 2026

    ಸರಗೂರು:  ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸೋಮವಾರದಂದು ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್…

    ಟೀಕೆ ಟಿಪ್ಪಣಿಗಳಿಗೆ ಅಭಿವೃದ್ದಿಯೇ ಉತ್ತರ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    March 16, 2026

    ಶಾಸಕರ ಪ್ರಶ್ನೆಗಳಿಗೆ ಉತ್ತರವಿಲ್ಲ: ‘ಹೀಗಾದರೆ ಸದನ ನಡೆಸುವುದು ಹೇಗೆ?’: ಸದನದಿಂದ ಹೊರನಡೆದ ಸ್ಪೀಕರ್ ಯು.ಟಿ. ಖಾದರ್

    March 16, 2026

    ಮಾರುಕಟ್ಟೆ ದರಕ್ಕಿಂತ ಮೂರು ಪಟ್ಟು ಹೆಚ್ಚು ಹಣ ನೀಡಿ ಜಮೀನು ಖರೀದಿ: ಸ್ಮಶಾನ ಭೂಮಿ ಕೊರತೆ ನೀಗಿಸಲು ಸರ್ಕಾರ ಪ್ಲಾನ್

    March 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.