ಕೊರಟಗೆರೆ: ಬೈಚಾಪುರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ತಿಪ್ಪೇಶ್ ಆರ್.ಟಿ.ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಕೊರಟಗೆರೆ ತಾಲೂಕು ತಹಶೀಲ್ದಾರ್ ಮಂಜುನಾಥ್ ತಿಳಿಸಿದರು.
ಕೊರಟಗೆರೆ ತಾಲೂಕಿನ ಬೈಚಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಯಿತು. ಮಧುಗಿರಿ ಉಪ ವಿಭಾಗಾಧಿಕಾರಿಗಳ ನಿರ್ದೇಶನದಂತೆ ಅನುಸೂಚಿತ ಜಾತಿಗೆ ಮೀಸಲಿದ್ದ ಅಧ್ಯಕ್ಷ ಸ್ಥಾನದ ಚುನಾವಣೆ ನಡೆಯಿತು.
ಎರಡನೇ ಅವಧಿಯ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅನುಸೂಚಿತ ಜಾತಿಗೆ ಮೀಸಲಿದ್ದ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ತಿಪ್ಪೇಶ್ ಆರ್ ಟಿ ಅವಿರೋಧ ಆಯ್ಕೆ ಮಾಡಲಾಯಿತು.
ಇದೇ ವೇಳೆ ಮಾತನಾಡಿದ ನೂತನ ಅಧ್ಯಕ್ಷ ತಿಪ್ಪೇಶ್, ಗ್ರಾಮ ಪಂಚಾಯಿತಿ ಎಲ್ಲ ಸದಸ್ಯರು ಸಾಮರಸ್ಯದಿಂದ ಒಟ್ಟಾಗಿ ಅವಿರೋಧವಾಗಿ ಅಯ್ಕೆ ಮಾಡಿದ್ದಾರೆ. ಎಲ್ಲಾ ಸದಸ್ಯರಿಗೂ ಸಹಕಾರದಿಂದ ನೀಡುತ್ತೇನೆ. ಗ್ರಾಮ ಪಂಚಾಯಿತಿಯ ಎಲ್ಲಾ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸೋಣ ಎಂದರಲ್ಲದೇ , ಗ್ರಾಮ ಪಂಚಾಯಿತಿಯ ಎಲ್ಲ ಸದಸ್ಯರಿಗೆ ನೂತನವಾಗಿ ಧನ್ಯವಾದಗಳನ್ನು ತಿಳಿಸಿದರು..
ಸುತ್ತಮುತ್ತಲಿನ ಗ್ರಾಮಸ್ಥರು ಮತ್ತು ಮತದಾರರು ನೂತನ ಅಧ್ಯಕ್ಷರಿಗೆ ಸಿಹಿ ತಿನ್ನಿಸಿ ಹಾರ ಹಾಕಿ ಸಂಭ್ರಮಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಪಿಡಿಒ ಹಾಗೂ ಸಿಬ್ಬಂದಿಗಳು ತಾಲೂಕ್ ಪಂಚಾಯತಿ ಅಧಿಕಾರಿಗಳು ಪೋಲಿಸ್ ಇಲಾಖೆ ಅಧಿಕಾರಿಗಳು ಗ್ರಾಮ ಪಂಚಾಯತಿಯಲ್ಲಿ ಸದಸ್ಯರು ಹಾಜರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA