ತುಮಕೂರು: ಆಯತಪ್ಪಿ ಚಿರತೆಯೊಂದು ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕಿನ ಪುಟ್ಟಮಾದಿಹಳ್ಳಿಯಲ್ಲಿ ನಡೆದಿದೆ.
ಗ್ರಾಮದ ಕೆಂಪಮ್ಮ ಎಂಬುವರ ಜಮೀನಿನಲ್ಲಿದ್ದ ಬಾವಿಗೆ ಬಿದ್ದಿದೆ. ಬಾವಿಗೆ ಬಿದ್ದ ಮೇಲೆ ಬರಲು ಸಾಧ್ಯವಾಗದೆ ಪ್ರಾಣ ಬಿಟ್ಟಿದ್ದು ಎರಡ್ಮೂರು ದಿನಗಳ ಹಿಂದೆ ಬಾವಿಗೆ ಬಿದ್ದಿದೆ ಎಂದು ಅಂದಾಜಿಸಲಾಗಿದೆ.
ಮಾಲೀಕರು ತೋಟಕ್ಕೆ ಬಂದು ಬಾವಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೊಳೆತ ಸ್ಥಿತಿ ತಲುಪಿರುವ ಚಿರತೆ ಕಳೆಬರ ಪತ್ತೆಯಾಗಿದೆ.
ತಕ್ಷಣವೇ ಅರಣ್ಯಾಧಿಕಾರಿಗಳಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ, ಚಿರತೆ ಶವ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA