ಬಾಗಲಕೋಟೆ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರೋದ್ರಿಂದ ಉದ್ಯಮಗಳು ಹೊರ ಹೋಗುತ್ತಿದೆ ಎಂಬ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಉತ್ತರಿಸಿದ್ದಾರೆ.
ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದು ಸತ್ಯಕ್ಕೆ ದೂರವಾಗಿದೆ. ಉದ್ಯಮಿಗಳು ಹೊರಹೋಗುವುದಾಗಿ ಹೇಳಿಲ್ಲ. ಇಲ್ಲಿ ಹೂಡಿಕೆ ಮಾಡಲು ಯಾರೂ ಹಿಂಜರಿದಿಲ್ಲ. ಅಲ್ಲಲ್ಲಿ ಕೊಲೆ, ಕಳವು ಪ್ರಕರಣಗಳು ನಡೆದಿವೆ. ಹಿಂದಿನ ಬಿಜೆಪಿ ಸರ್ಕಾರದಲ್ಲೂ ನಡೆದಿದ್ದವು. ಆಗ ಹೋಲಿಸಿದರೆ ಈಗ ಕಡಿಮೆ ಆಗಿವೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
ಬಿಜೆಪಿ—ಜೆಡಿಎಸ್ ಪಾದಯಾತ್ರೆಯಲ್ಲಿ ಒಡಕು ವಿಚಾರಕ್ಕೆ ಸಂಬಂಧಿಸಿದಂತೆ ಇದೇ ವೇಳೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಜೊತೆಗಿದ್ದ ಜೆಡಿಎಸ್ ನಮ್ಮೊಂದಿಗೆ ಬಂದು, ಪುನಃ ಬಿಜೆಪಿ ಕಡೆ ಹೋಗಿದೆ. ಎರಡೂ ಪಕ್ಷಗಳ ಹೊಂದಾಣಿಕೆ ಎಷ್ಟು ದಿನ ಇರಲಿದೆ ಎಂಬುದನ್ನು ಕಾದು ನೋಡಬೇಕು ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


