ನವದೆಹಲಿ: ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಗಳ ಬೆಲೆ ಏರಿಕೆ ಮತ್ತೆ ಆರಂಭಗೊಂಡಿದೆ. ಬಜೆಟ್ ನಂತರ ತೈಲ ಕಂಪನಿಗಳು ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯಲ್ಲಿ ಏರಿಕೆ ಮಾಡಿವೆ. 19 ಕೆಜಿ ವಾಣಿಜ್ಯ ಸಿಲಿಂಡರ್ ಗಳಲ್ಲಿ ಮಾತ್ರ ಬೆಲೆ ಹೆಚ್ಚಳ ಮಾಡಲಾಗಿದೆ.
ಸದ್ಯ 14 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ ಜನಸಾಮಾನ್ಯರು ಸಮಾಧಾನಪಡುವಂತಿಲ್ಲ, ಯಾವುದೇ ಕ್ಷಣದಲ್ಲಾದರೂ 14 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ ಮಾಡುವ ಸಾಧ್ಯತೆಗಳನ್ನು ತಳ್ಳಿಹಾಕುವಂತಿಲ್ಲ.
ಆಗಸ್ಟ್ 1 ರಿಂದ 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆ ಜಾರಿಗೆ ಬರಲಿದೆ. 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 8.50 ರೂಪಾಯಿ ಹೆಚ್ಚಳ ಮಾಡಲಾಗಿದೆ. ಹೊಸ ಬೆಲೆ ಜಾರಿಗೆ ಬಂದ ನಂತರ ದೆಹಲಿ, ಮುಂಬೈ, ಕೋಲ್ಕತ್ತಾ, ಚೆನ್ನೈ ಸೇರಿದಂತೆ ದೇಶಾದ್ಯಂತ ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಗಳು ದುಬಾರಿಯಾಗಲಿವೆ.
ದೆಹಲಿ ಮತ್ತು ಮುಂಬೈನಂತಹ ನಗರಗಳಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಗಳ ಹೊಸ ಬೆಲೆಗಳು ಆಗಸ್ಟ್ 1, 2024 ರಂದು ಬೆಳಿಗ್ಗೆ 6 ರಿಂದ ಜಾರಿಗೆ ಬಂದಿವೆ. ದೆಹಲಿಯಲ್ಲಿ 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆ 1646 ರೂ.ನಿಂದ 1652.50 ರೂ.ಗೆ ಏರಿಕೆಯಾಗಿದೆ.
ದೆಹಲಿಯಲ್ಲಿ ಪ್ರತಿ ಸಿಲಿಂಡರ್‌ಗೆ 6.50 ರೂಪಾಯಿ ಏರಿಕೆಯಾಗಿದೆ. ಕೋಲ್ಕತ್ತಾದಲ್ಲಿ ಸಿಲಿಂಡರ್ ಬೆಲೆ 8.50 ರೂಪಾಯಿಗಳಷ್ಟು ಹೆಚ್ಚಾಗಿದೆ.
ಜೊತೆಗೆ ಮುಂಬೈನಲ್ಲೂ ಸಿಲಿಂಡರ್ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಇಲ್ಲಿ ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಬೆಲೆ 1,598 ರಿಂದ 1605 ರೂ.ಗೆ ಅಂದರೆ 7 ರೂಪಾಯಿ ಏರಿಕೆಯಾಗಿದೆ. ಚೆನ್ನೈನಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1809.50 ರೂ.ನಿಂದ 1817 ರೂ.ಗೆ ಏರಿಕೆಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296