ರಾಂಚಿ: ಸದನದಲ್ಲಿ ಗದ್ದಲವನ್ನು ಸೃಷ್ಟಿಸುವ ಮೂಲಕ ಸದನಕ್ಕೆ ಅಡ್ಡಿಪಡಿಸಿದ ಕಾರಣ ಜಾರ್ಖಂಡ್ನ 18 ಬಿಜೆಪಿ ಶಾಸಕರನ್ನು ಆಗಸ್ಟ್ 2ರ 2 ಗಂಟೆಯವರೆಗೆ ವಿಧಾನಸಭೆಯಿಂದ ಅಮಾನತುಗೊಳಿಸಲಾಗಿದೆ.
ನಿನ್ನೆ ವಿರೋಧ ಪಕ್ಷದ ಶಾಸಕರನ್ನು ಸದನದಿಂದ ಹೊರಗೆ ಕಳುಹಿಸಿದ್ದರ ವಿರುದ್ಧ ಸದನದಲ್ಲಿ ಗದ್ದಲವನ್ನು ಸೃಷ್ಟಿಸುವ ಮೂಲಕ ಸದನಕ್ಕೆ ಅಡ್ಡಿಪಡಿಸಿದ ಕಾರಣದಿಂದಾಗಿ ಸ್ಪೀಕರ್ ರವೀಂದ್ರ ನಾಥ್ ಮಹ್ತೋ ಅವರು ಬಿಜೆಪಿ ಸದಸ್ಯರ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
ಮಾರ್ಷಲ್ ಗಳ ಸಹಾಯದಿಂದ ಶಾಸಕರನ್ನು ಇಂದು (ಗುರುವಾರ) ಸದನದಿಂದ ಹೊರಗೆ ಕಳುಹಿಸಲಾಗಿದೆ.
ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಉದ್ಯೋಗ ಸೇರಿದಂತೆ ಇನ್ನಿತರೆ ಸಮಸ್ಯೆಗಳ ಕುರಿತ ವಿರೋಧ ಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಿಲ್ಲವೆಂದು ಬಿಜೆಪಿ ಸದಸ್ಯರು ಪ್ರತಿಭಟಿಸಿದ್ದರು.
ಪ್ರತಿಭಟನೆ ವೇಳೆ ಕೆಲವು ದಾಖಲೆಗಳನ್ನು ಹರಿದು ಹಾಕಿದ್ದಾರೆ. ಈ ವೇಳೆ ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರು ತೀವ್ರ ಮಾತಿನ ಜಟಾಪಟಿ ನಡೆದಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296