ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (KSET) 2024 ಗೆ ಇತ್ತೀಚೆಗೆ ಅಧಿಸೂಚನೆ ಹೊರಡಿಸಿತ್ತು. ಇದೀಗ ಆನ್‌ಲೈನ್ ಮೂಲಕ ನೋಂದಣಿ ಪ್ರಕ್ರಿಯೆ ಆರಂಭಿಸಿದ್ದಾಗಿ ಪ್ರಾಧಿಕಾರ ಮಾಹಿತಿ ನೀಡಿದೆ.
ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಗೆ (KSET) ಈ ವರ್ಷ ಯಾರೆಲ್ಲ ಅರ್ಜಿ ಸಲ್ಲಿಸಿ ಪರೀಕ್ಷೆ ಬರೆಯಲು ಕಾಯುತ್ತಿರುವ ಅಭ್ಯರ್ಥಿಗಳು ಕೂಡಲೇ ಸೂಕ್ತ ದಾಖಲಾತಿಗಳ ಸಮೇತ ನೋಂದಣಿ ಮಾಡಿಕೊಳ್ಳಬೇಕು. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಆನ್‌ಲೈನ್ ನೋಂದಣಿಯನ್ನು ಜುಲೈ 30ರಿಂದ ಆರಂಭಿಸಿದೆ.
ಸ್ನಾತಕೋತ್ತರ ಪದವಿ ಪಡೆದ ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ kea.kar.nic.in ನಲ್ಲಿ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ಮುಂದಿನ ಆಗಸ್ಟ್ 22 ರವರೆಗೆ ನೋಂದಣಿ ಅವಕಾಶ ಇದೆ.
* ಆನ್ ಲೈನ್ ಅರ್ಜಿ ಸಲ್ಲಿಕೆ ಆರಂಭ ದಿನ – 2024 ಜುಲೈ 30
* ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಕಡೆಯ ದಿನ – 2024ರ ಆಗಸ್ಟ್ 22
* ಅರ್ಜಿ ಶುಲ್ಕ ಸಲ್ಲಿಕೆಯ ಗಡುವಿನ ದಿನಾಂಕ – 2024 ಆಗಸ್ಟ್ 26
* ಕೆಎಸ್ ಇಟಿ ಪರೀಕ್ಷೆ ಯಾವಾಗ- 2024 ನವೆಂಬರ್ 24
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


