ದಿನಕ್ಕೆ 14 ಗಂಟೆ ಕೆಲಸದ ಅವಧಿ ವಿಸ್ತರಣೆ ಪ್ರಸ್ತಾವ ವಿರೋಧಿಸಿ ಒಂದೆಡೆ ಐಟಿ ಉದ್ಯೋಗಿಗಳು (IT Employees) ಬೃಹತ್ ಪ್ರತಿಭಟನೆಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ನಾಳೆ ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಪ್ರಸ್ತಾವನೆ ಸಂಪೂರ್ಣ ಕೈ ಬಿಡಲು ಆಗ್ರಹಿಸಿ ಪ್ರತಿಭಟನೆ ನಡೆಸಲಿದ್ದಾರೆ.
ದಿನಕ್ಕೆ 14 ಗಂಟೆ ಕೆಲಸದ ಅವಧಿ ವಿಸ್ತರಣೆ ಪ್ರಸ್ತಾವ ವಿರೋಧಿಸಿ ನಾಳೆ ಸರ್ಕಾರದ ವಿರುದ್ಧ ಹಾಗೂ ಐಟಿ ಕಂಪನಿಗಳ ವಿರುದ್ಧ ಬೃಹತ್ ಪ್ರತಿಭಟನೆಗೆ ಐಟಿ ಉದ್ಯೋಗಿಗಳು ಸಜ್ಜು ಮಾಡಿಕೊಳ್ಳುತ್ತಿದ್ದಾರೆ. ಐಟಿ ಉದ್ಯೋಗಿಗಳ ಸಂಘಟನೆಗಳು ಹಾಗೂ ಕಾರ್ಮಿಕ ಸಂಘಟನೆಗಳು ಒಟ್ಟಾಗಿ ಈ ಪ್ರತಿಭಟನೆಗೆ ತಯಾರು ಮಾಡಿಕೊಂಡಿವೆ. ಫ್ರೀಡಂ ಪಾರ್ಕ್‌ನಲ್ಲಿ ಈ ಪ್ರತಿಭಟನೆ ನಡೆಯಲಿದೆ.
ಮುಷ್ಕರದಲ್ಲಿ ಸಾವಿರಾರು ಐಟಿ ಎಂಪ್ಲಾಯಿಗಳು ಭಾಗವಹಿಸಲಿದ್ದಾರೆ. ಐತಿಹಾಸಿಕವಾಗಿ, ಇದೇ ಮೊದಲ ಬಾರಿಗೆ ಐಟಿ ಉದ್ಯೋಗಿಗಳು ಪ್ರತಿಭಟನೆಗಾಗಿ ರಸ್ತೆಗಿಳಿಯುತ್ತಿದ್ದಾರೆ. ಉದ್ಯೋಗಗಳನ್ನು ಹೆಚ್ಚಿಸಬೇಕು. ಅದರ ಬದಲು ಸಮಯ ವಿಸ್ತರಣೆ ಮಾಡುವುದಲ್ಲ. ಹೀಗೆ ಮಾಡುವುದರಿಂದ ಒತ್ತಡ ಹೆಚ್ಚಾಗಿ ಉದ್ಯೋಗಿಗಳ ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಲಿದೆ ಎಂದು ಆಕ್ರೋಶಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


